ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ಒಟ್ಟು 100 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಭಾರತದ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 943 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ಅನ್ನು ನಿರ್ಮಿಸಲಾಗುತ್ತಿದ್ದು, ಕ್ರೀಡಾಂಗಣದ ಮುಖ್ಯ ಆವರಣವು 80 ಎಕರೆ ಜಾಗದಲ್ಲಿ ತಲೆಯೆತ್ತಲಿದೆ. ಈ ಬೃಹತ್ ಕ್ರೀಡಾಂಗಣವು ಏಕಕಾಲಕ್ಕೆ 80,000 ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯ ಹೊಂದಿರಲಿದ್ದು, ಮುಂದಿನ 2 ರಿಂದ 3 ವರ್ಷಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ.
ಈ ಹೈಟೆಕ್ ಸ್ಟೇಡಿಯಂ ಆವರಣದಲ್ಲಿ 500ಕ್ಕೂ ಹೆಚ್ಚು ವಾಹನಗಳ ನಿಲುಗಡೆಗೆ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮತ್ತು ಚಿಲ್ಲರೆ ವ್ಯಾಪಾರ ಮಳಿಗೆಗಳು, ಆಟಗಾರರು ಮತ್ತು ಸಿಬ್ಬಂದಿಗಾಗಿ ಅತ್ಯಾಧುನಿಕ ವಸತಿ ಗೃಹಗಳು, ಹೆಲಿಪ್ಯಾಡ್ ಹಾಗೂ ಸುತ್ತಲೂ ಆಕರ್ಷಕ ಹಸಿರು ವಲಯವನ್ನು (Green Zone) ನಿರ್ಮಿಸಲು ಯೋಜನೆಯಲ್ಲಿ ಚಾಲನೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


