ಧಾರವಾಡ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ದುರುಳನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದ ಬಡಾವಣೆಯೊಂದರಲ್ಲಿ ಬೆಳಕಿಗೆ ಬಂದಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದುರುಳ ಖಾಜಾಸಾಬ್ ಪಠಾಣ್ ಎಂಬಾತನ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿ ಖಾಜಾಸಾಬ್ ಪಠಾಣ್, ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ. ಅಲ್ಲಿ ಆಕೆಗೆ ತಾನು ಪ್ರೀತಿಸುವುದಾಗಿ ಹೇಳಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ಅನುಮಾನಗೊಂಡ ಸ್ಥಳೀಯರು ಆರೋಪಿ ಖಾಜಾಸಾಬ್ ನನ್ನು ಹಿಡಿದು ತರಾಟೆಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ, ಅದರಲ್ಲಿ ಅಪ್ರಾಪ್ತ ಬಾಲಕಿಯ ಜೊತೆಗಿದ್ದ ಕೆಲವು ಆಕ್ಷೇಪಾರ್ಹ ಹಾಗೂ ಖಾಸಗಿ ಫೋಟೋಗಳು ಪತ್ತೆಯಾಗಿವೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸದ್ಯ ವಿದ್ಯಾಗಿರಿ ಠಾಣೆ ಪೊಲೀಸರು ಆರೋಪಿ ಖಾಜಾಸಾಬ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


