nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    ರಾಜ್ಯ ಸುದ್ದಿ May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    By adminMay 25, 2026No Comments2 Mins Read
    siddaramaiah

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತಾದ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ನಾಳೆ (ಮೇ 26) ದೆಹಲಿಯಲ್ಲಿ ನಡೆಯಲಿರುವ ಪ್ರಮುಖ ಸಭೆಗೆ ಹೈಕಮಾಂಡ್ ತಮ್ಮನ್ನು ಆಹ್ವಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಖುದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ನನ್ನನ್ನು ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಸಭೆ ನಿಗದಿಯಾಗಿದೆ. ಆದರೆ ಸಭೆಯ ಅಜೆಂಡಾ (ವಿಷಯ) ಏನೆಂಬುದು ನನಗೆ ತಿಳಿದಿಲ್ಲ. ನಿನ್ನೆ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ಮಾಹಿತಿ ನೀಡಿದರು. ಹಾಗಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

    ಮೇ 20ರಂದು ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. 2023ರ ವಿಧಾನಸಭಾ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರದ ಒಪ್ಪಂದವಾಗಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ, ಶಿವಕುಮಾರ್ ಬೆಂಬಲಿಗರು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ತಾವು ಪೂರ್ಣ 5 ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಈ ಹಿಂದೆ ಹೇಳಿಕೆ ನೀಡಿದ್ದರು.

    ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ:

    ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನನ್ನನ್ನು ಹೈಕಮಾಂಡ್ ದೆಹಲಿಗೆ ಕರೆದರೆ ನಾನು ಖಂಡಿತ ಹೋಗುತ್ತೇನೆ. ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗಳಿಗೆ ಸಮಯವೇ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ. ಜೊತೆಗೆ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.

    ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಗೆ ಒಲವು ತೋರಿದ್ದಾರೆ. ಹೈಕಮಾಂಡ್ ಸದ್ಯಕ್ಕೆ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದರೆ, ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಂದುವರಿಯಲಿದ್ದಾರೆ ಎಂಬ ಸ್ಪಷ್ಟ ಸಂದೇಶ ರವಾನೆಯಾಗಲಿದೆ. ಪ್ರಸ್ತುತ ರಾಜ್ಯ ಸಂಪುಟದಲ್ಲಿ 34 ಸಚಿವ ಸ್ಥಾನಗಳ ಪೈಕಿ 3 ಸ್ಥಾನಗಳು ಖಾಲಿ ಇವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹಾಸನ:  ಹಾಸನ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರವಾಗಿರುವ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ (Downy Mildew) ರೋಗ ತೀವ್ರವಾಗಿ ವ್ಯಾಪಿಸಿದ್ದು,…

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.