nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    ಜಿಲ್ಲಾ ಸುದ್ದಿ May 27, 2026

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    By adminMay 27, 2026No Comments1 Min Read

    ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ ಬರೋಬ್ಬರಿ ₹45 ಕೋಟಿಗೂ ಅಧಿಕ ಹಣದ ಹಗರಣ ಎಸಗಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ನಿವೃತ್ತ ಕಂಟ್ರೋಲರ್ ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

    ಬಂಧಿತ ಆರೋಪಿಗಳು:

    ಎಚ್. ಡಿ. ನಾರಾಯಣಸ್ವಾಮಿ (ವಿಶ್ರಾಂತ ಕುಲಪತಿ)

    ಕೆ. ಎಲ್. ಸುರೇಶ್ (ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ)

    ಮೃತ್ಯುಂಜಯ ಹಿರೇಮಠ (ವಿಶ್ವವಿದ್ಯಾಲಯದ ಎಫ್‌ಡಿಎ)

    ಬೊಪ್ಪಣ್ಣ (ಬೆಂಗಳೂರು ಎಂಟರ್‌ಪ್ರೈಸಸ್ ಮಾಲೀಕರು)

    ಮಂಜುನಾಥ (ಬೆಂಗಳೂರು ಎಂಟರ್‌ಪ್ರೈಸಸ್ ಮಾಲೀಕರು)

    ರಾಮಗೊಂಡ

    ಕಳೆದ 2017–18ರ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ₹45 ಕೋಟಿಗೂ ಅಧಿಕ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ನಿಯಮಬಾಹಿರವಾಗಿ ಅಕ್ರಮ ಎಸಗಲಾಗಿತ್ತು. ಈ ಅವಧಿಯಲ್ಲಿ ಎಚ್. ಡಿ. ನಾರಾಯಣಸ್ವಾಮಿ ಅವರು ಕುಲಪತಿಯಾಗಿ ಹಾಗೂ ಕೆ.ಎಲ್.ಸುರೇಶ್ ಅವರು ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಶ್ವವಿದ್ಯಾಲಯದ ಎಫ್‌ ಡಿಎ ಆಗಿದ್ದ ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ ಎಂಟರ್‌ಪ್ರೈಸಸ್ ಜೊತೆ ಕೈಜೋಡಿಸಿ ಈ ಬೃಹತ್ ಹಗರಣವನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ತಕ್ಷಣ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೆಲ ಆರೋಪಿಗಳನ್ನು ಬೀದರ್‌ ನಲ್ಲಿ ಹಾಗೂ ಇನ್ನು ಕೆಲವರನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಂಧಿತರೆಲ್ಲರನ್ನೂ ಬೀದರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ. ಎಸ್. ಸುಬ್ರಹ್ಮಣ್ಯೇಶ್ವರ ರಾವ್ ಹಾಗೂ ಎಸ್‌ಪಿಗಳಾದ ಬದ್ರಿನಾಥ್ ಮತ್ತು ಸಿದ್ದರಾಜು ಅವರ ನೇರ ಮಾರ್ಗದರ್ಶನದಲ್ಲಿ, ಬೀದರ್ ಲೋಕಾಯುಕ್ತ ಡಿವೈಎಸ್‌ ಪಿಗಳಾದ ಹಣಮಂತರಾಯ ಮತ್ತು ಸಂತೋಷ್ ರಾಠೋಡ್ ನೇತೃತ್ವದ ಸಿಬ್ಬಂದಿ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.