ಕೊರಟಗೆರೆ: ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ತಹಶೀಲ್ದಾರ್ ಮಂಜುನಾಥ್ ಪಟ್ಟಣದ ವಿವಿಧ ರಸಗೊಬ್ಬರ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಪ್ರತಿ ಅಂಗಡಿಗಳಲ್ಲೂ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಸ್ಟಾಕ್ ಇದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು.
ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಪ್ರಮಾಣದಲ್ಲಿ ಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ಸಂಗ್ರಹಿಸಿಡುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಯಿತು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮಂಜುನಾಥ್, “ಯಾವುದೇ ರಸಗೊಬ್ಬರ ಅಂಗಡಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮಳೆ ಬಿದ್ದ ನಂತರವೂ ಅಗತ್ಯ ಪ್ರಮಾಣದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಲಭ್ಯವಿರುತ್ತದೆ” ಎಂದು ತಿಳಿಸಿದರು.
ರೈತರಿಗೆ ಅಗತ್ಯ ವಸ್ತುಗಳು ಸಮರ್ಪಕವಾಗಿ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಂಡಿದ್ದು, ಕೊರತೆ ಉಂಟಾಗದಂತೆ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ರುದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಆರ್ ಐ ಬಸವರಾಜು, ಪುರಸಭೆ ಆರ್ ಐ ವೇಣುಗೋಪಾಲ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


