ಮಧುಗಿರಿ : ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಸ್ಮಾರ್ಟ್ ಕಾರ್ಡ್ ಗಳಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳ ಬೇಕೆಂದು ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹೆಚ್.ಸಿ. ಶಾಮಣ್ಣರೆಡ್ಡಿ ತಿಳಿಸಿದರು.
ಪಟ್ಟಣದ ಪಾವಗಡ ರಸ್ತೆಯ ಸಮೀಪವಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪ್ರತಿಮೆಯ ಬಳಿ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ 130 ಜನರಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಹಾಗೂ ಲೇಬರ್ ಕಾರ್ಡ್ ಹೊಂದಿರುವ 24 ಕಟ್ಟಡ ಕಾರ್ಮಿಕರಿಗೆ ಸೇಫ್ಟಿ ಕಿಟ್ ಗಳನ್ನ ವಿತರಿಸಿ ಮಾತನಾಡಿ
ಸರ್ಕಾರವು ಕಾರ್ಮಿಕರಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೂ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸ್ಮಾರ್ಟ್ ಕಾರ್ಡ್ ಗಳ ಅವಶ್ಯಕತೆ ಹೆಚ್ಚಿದ್ದೂ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸ ಬೇಕು. ಜೊತೆಯಲ್ಲಿ ಕಾರ್ಮಿಕರು ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಳ್ಳಬೇಕಾಗಿದ್ದು ಕಾರ್ಮಿಕರು ಒಗ್ಗಟ್ಟಿನಿಂದ ಇರುವುದರ ಜೊತೆಯಲ್ಲಿ ಅವರ ಐಕ್ಯತೆಯು ಚಿರಾಯುವಾಗಿರಬೇಕು ಎಂದರು.
ಶ್ರೀಕಾಂತ್ ಮಾತನಾಡಿ, ಕಾರ್ಮಿಕ ಇಲಾಖೆಯು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಂಡರೆ ಶೈಕ್ಷಣಿಕ ನೆರವು, ಮದುವೆ ಸಹಾಯಧನ, ವೈದ್ಯಕೀಯ ಸೌಲಭ್ಯ, ಪಿಂಚಣಿ ಹಾಗೂ ಅಪಘಾತ ಪರಿಹಾರ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಲಿವೆ. ಅಸಂಘಟಿತ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರವು ಅಂಬೇಡ್ಕರ್ ಸಹಾಯ ಹಸ್ತ ಎಂಬ ಯೋಜನೆಯನ್ನು ಮಾಡಿದ್ದೂ ಕಡ್ಡಾಯವಾಗಿ ಇ–ಶ್ರಮ್ ಪೋರ್ಟಲ್ ನಲ್ಲಿ ಕಾರ್ಮಿಕರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಘದ ರಾಜ್ಯ ಉಪಾಧ್ಯಕ್ಷ ವಿ.ದಾಸ್, ಜಿಲ್ಲಾಧ್ಯಕ್ಷ ಗೋವಿಂದರಾಜು, ತಾಲೂಕು ಅಧ್ಯಕ್ಷ ನೇರಳೆಕೆರೆ ರಂಗನಾಥ್, ಕೆ.ಹೆಚ್.ಆನಂದ್ ಕುಮಾರ್, ವೇಣುಗೋಪಾಲ್, ಭಾಗ್ಯಮ್ಮ, ನವಾಜ್, ಜಗದೀಶ್, ರಾಮಾಂಜನೇಯ, ಮಂಜುನಾಥ್, ಪಾರ್ವತಿ ಹಾಗೂ ಇತರೆ ಕಾರ್ಮಿಕರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


