nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    ರಾಜ್ಯ ಸುದ್ದಿ May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    By adminMay 28, 2026No Comments2 Mins Read
    siddaramaiah karnataka cm

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಈಗ ಬಹುತೇಕ ಖಚಿತವಾಗಿದೆ.

    ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರದಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಹಲವು ನಾಯಕರು ಈ ವೇಳೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.

    ನನ್ನ ಜೀವನ ತೆರೆದ ಪುಸ್ತಕ; ಸಿದ್ದರಾಮಯ್ಯ

    ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಎರಡು ದಿನಗಳ ಹಿಂದೆಯೇ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಅದರಂತೆ ನಾನು ಇಂದು ರಾಜೀನಾಮೆ ಸಲ್ಲಿಸಿದ್ದೇನೆ. ನನಗೆ ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇದಕ್ಕಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದರು. ಅಲ್ಲದೆ, “ವಿರೋಧ ಪಕ್ಷಗಳು ನನ್ನ ವಿರುದ್ಧ ಸುಳ್ಳು ಕಥೆಗಳನ್ನು ಕಟ್ಟುತ್ತಿವೆ. ನಾನು ಎಂದಿಗೂ ಹಣದ ಹಿಂದೆ ಬಿದ್ದಿಲ್ಲ, ಆಸ್ತಿ ಮಾಡಿಲ್ಲ. ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ” ಎಂದು ಭಾವುಕರಾಗಿ ನುಡಿದರು.

    ‘ಕಾವೇರಿ’ಯಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್‌:

    ಇದಕ್ಕೂ ಮುನ್ನ ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಿರಿಯ ಸಚಿವರು ಹಾಗೂ ಶಾಸಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಬ್ರೇಕ್‌ಫಾಸ್ಟ್ ಮೀಟಿಂಗ್‌’ನಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ಮುಂದಿನ ಸಿಎಂ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಸಚಿವರಿಗೆ ಸೂಚಿಸಿದರು. ಈ ವೇಳೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದರು.

    ಭಿನ್ನಮತಕ್ಕೆ ಅವಕಾಶವಿಲ್ಲ ಎಂದ ಹೆಚ್.ಕೆ. ಪಾಟೀಲ್:

    ಈ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸಚಿವ ಹೆಚ್.ಕೆ. ಪಾಟೀಲ್, “ಹೈಕಮಾಂಡ್ ಸೂಚನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಸೂಚಿಸಲಾಗಿದೆ. ಇದು ಏಕಮತದ ತೀರ್ಮಾನವಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗುತ್ತಿಲ್ಲ” ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಮಾಸ್ಟರ್ ಪ್ಲಾನ್; ನಾಲ್ಕು ಡಿಸಿಎಂ ಹುದ್ದೆ ಸೃಷ್ಟಿ?

    ಸಿದ್ದರಾಮಯ್ಯ ಅವರ ನಿರ್ಗಮನದ ಬಳಿಕ ಅಹಿಂದ ಹಾಗೂ ವಿವಿಧ ಸಮುದಾಯಗಳ ನಾಯಕರ ಅಸಮಾಧಾನ ತಣಿಸಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು ನಾಲ್ಕು ಉಪಮುಖ್ಯಮಂತ್ರಿ (DCM) ಹುದ್ದೆಗಳನ್ನು ಸೃಷ್ಟಿಸಲು ಚಿಂತನೆ ನಡೆಸಲಾಗುತ್ತಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ.

    ವಿಜಯೇಂದ್ರ ಆಕ್ರೋಶ:

    ಈ ಆಡಳಿತ ಬದಲಾವಣೆಯ ಕುರಿತು ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಆರ್ಥಿಕವಾಗಿ ನೆಲಕಚ್ಚಿದೆ. ಈಗ ಯಾರೇ ಮುಖ್ಯಮಂತ್ರಿಯಾದರೂ ರಾಜ್ಯದ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ” ಎಂದು ಟೀಕಿಸಿದ್ದಾರೆ.

    ಸದ್ಯ ಡಿ.ಕೆ. ಶಿವಕುಮಾರ್ ಮೇ 31 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮುಂದೆ ಅಭಿಮಾನಿಗಳು ಸಿಹಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.