ಬೆಂಗಳೂರು: ಪಾವಗಡದ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರು ವಿಧಿವಶರಾಗಿದ್ದಾರೆ.
ಇಂದು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು, ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಸಂತಾಪ ವ್ಯಕ್ತಪಡಿಸಿದರು.
ಹಲವು ಮುಖಂಡರು, ಅಭಿಮಾನಿಗಳು ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬದವರು ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


