ತಿಪಟೂರು: ತಾಲ್ಲೂಕಿನ ಬಾಳುವನೆರಳು ರುದ್ರಾಪುರ ಗ್ರಾಮದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪೂಜ್ಯ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1 ಲಕ್ಷ ರೂಪಾಯಿ ಮೊತ್ತದ ಧನಸಹಾಯ ಮಂಜೂರುಗೊಳಿಸಿದ್ದಾರೆ.
ಈ ಧನಸಹಾಯದ ಡಿಡಿಯನ್ನು (Demand Draft) ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಅವರು ಗ್ರಾಮಸ್ಥರಿಗೆ ಹಸ್ತಾಂತರಿಸಿ, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿ ಲೋಕೇಶ್, ಯೋಜನೆಯ ವಲಯ ಮೇಲ್ವಿಚಾರಕರಾದ ಪ್ರದೀಪ್, ಸೇವಾಪ್ರತಿನಿಧಿ ವೇದಾ ಹಾಗೂ ಧರ್ಮಸ್ಥಳ ಸಂಘದ ಪಾಲುದಾರ ಬಂಧುಗಳು, ಊರಿನ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


