nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    ತುಮಕೂರು May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    By adminMay 30, 2026No Comments1 Min Read
    crime

    ತುಮಕೂರು: ನೇರಳೆಹಣ್ಣು ಕೀಳಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ನಾರೆನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತ ಮಕ್ಕಳನ್ನು ನಾರೆನಾಗೇನಹಳ್ಳಿ ಗ್ರಾಮದ ಕಲ್ಪನ ಹಾಗೂ ಅಜಯ್ ರೆಡ್ಡಿ ಎಂಬುವರ ಮಕ್ಕಳಾದ ಸುಗುಣಕರರೆಡ್ಡಿ (10), ಧನುಷ್ ರೆಡ್ಡಿ (8) ಹಾಗೂ ದೇವಿ ಅವರ ಪುತ್ರನಾದ ಸುದರ್ಶನರೆಡ್ಡಿ (10) ಎಂದು ಗುರುತಿಸಲಾಗಿದೆ.


    Provided by
    Provided by

    ಈ ಚಿಕ್ಕ ಮಕ್ಕಳು ಮಧ್ಯಾಹ್ನದ ವೇಳೆ ಗ್ರಾಮದ ಸಮೀಪವಿರುವ ತೋಟವೊಂದರಲ್ಲಿ ನೇರಳೆ ಮರಗಳ ಬಳಿ ಹೋಗಿದ್ದಾರೆ. ಮರದಲ್ಲಿದ್ದ ಹಣ್ಣು ತಿಂದ ಬಳಿಕ ನೀರು ಕುಡಿಯಲು ಶೇಖರಣೆ ಮಾಡಿದ್ದ ವಾಟರ್ ಟ್ಯಾಂಕ್ ಬಳಿ ಹೋಗಿ ಅಲ್ಲಿ ಕಾಲು ಜಾರಿ ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

    ಈ ಮೂವರು ಮಕ್ಕಳ ಸುದ್ದಿ ತಿಳಿದ ಗ್ರಾಮಸ್ಥರು ಮಕ್ಕಳ ಮುಖವನ್ನು ನೋಡಿ ಕಣ್ಣೀರಿಟ್ಟರು. ಇನ್ನು ಮಕ್ಕಳ ಹೆತ್ತ ತಂದೆ ತಾಯಿಗಳ ಗೋಳು ಹೇಳತೀರದಾಗಿತ್ತು. ಈ ಬಗ್ಗೆ ರೊದ್ದಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೈಕ್‌ ಗಳ ಡಿಕ್ಕಿ ಸಾವು: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಕೆಜಿಟಿ ನಗರದ ಜಿ.ವೀರಾರೆಡ್ಡಿ (64) ಎಂದು ಗುರುತಿಸಲಾಗಿದೆ. ಮೃತರು ಪಾವಗಡ ಪಟ್ಟಣದ ಚಳ್ಳಕೆರೆ ಕ್ರಾಸ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡ ವೀರಾರೆಡ್ಡಿ ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುತ್ತಾರೆ.

    ಆಟೋ ಚಾಲಕ ಸಾವು: ಪಾವಗಡ ತಾಲ್ಲೂಕು ಸಿ.ಕೆ.ಪುರ ಬಳಿ ಆಟೋ ಪಲ್ಟಿಯಾದ್ದರಿಂದ ಆಟೋ ಚಾಲಕ ಹನುಮಂತು (40) ಎಂಬುವರು ಮೃತಪಟ್ಟಿರುತ್ತಾರೆ. ಗುಡಿಬಂಡೆ ಮಂಡಲನ ಎನ್.ಆರ್. ರೊಪ್ಪದವರು ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ

    May 30, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.