ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ(ಪಿ.ಯು.ಸಿ. ಮತ್ತು ಸಮಾನಾಂತರ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಜೂನ್ 8ರೊಳಗಾಗಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ–ಅಂಚೆ: bcwdhelpline@gmail.com ಮೂಲಕ ಅಥವಾ ಜಿಲ್ಲಾ/ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ವಾ.ಸಂ.08133–295500 ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


