nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    ಜಿಲ್ಲಾ ಸುದ್ದಿ May 31, 2026

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    By adminMay 31, 2026No Comments2 Mins Read
    mahesh

    ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಿರುವ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಕಾಂಗ್ರೆಸ್ ಹಿರಿಯ ನಾಯಕರಿಗೆ ಒತ್ತಾಯಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಕಷ್ಟದ ಕಾಲದಲ್ಲೂ ತ್ಯಾಗ ಮತ್ತು ಸತ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ ಗೌರವ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಲ್ಲುತ್ತದೆ. ಎಚ್.ಡಿ. ಕೋಟೆ ಮತ್ತು ಸರಗೂರು ಎರಡು ತಾಲೂಕುಗಳ ಜನರ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಇಂತಹ ಜನಪರ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೇಬೇಕು ಎಂದರು.

    “ಶಾಸಕ ಅನಿಲ್ ಚಿಕ್ಕಮಾದು ಅವರ ರಾಜಕೀಯ ಜೀವನ ಅತ್ಯಂತ ಶುದ್ಧ ಮತ್ತು ಪ್ರಾಮಾಣಿಕತೆಗೆ ಮಾದರಿಯಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅವರು ಅನೇಕ ಯೋಜನೆಗಳನ್ನು ತಂದಿದ್ದು, ರಸ್ತೆ, ವಿದ್ಯುತ್, ನೀರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶಾಶ್ವತ ಬದಲಾವಣೆ ತಂದಿದ್ದಾರೆ. ಇಂತಹ ಜನಪ್ರಿಯ ನಾಯಕರಿಗೆ ಸಚಿವ ಸ್ಥಾನ ದೊರೆತರೆ ತಾಲೂಕಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ.”

    — ಆರ್ಯ ಮಹೇಶ್, ಯುವ ಮುಖಂಡ

    ಅನಿಲ್ ಚಿಕ್ಕಮಾದು ಅವರ ಹೋರಾಟದ ಮನೋಭಾವ ಮತ್ತು ಜನಪರ ಕಾಳಜಿ ಯುವ ನಾಯಕರಿಗೆ ಪ್ರೇರಣೆಯಾಗಿದೆ. ಗ್ರಾಮ ಮಟ್ಟದಲ್ಲೂ ಜನರು ಅವರ ಮೇಲೆ ಅಪಾರ ವಿಶ್ವಾಸ ಹೊಂದಿದ್ದಾರೆ. ಪಕ್ಷದ ಉನ್ನತ ನಾಯಕತ್ವವು ಕಾರ್ಯಕರ್ತರ ಮತ್ತು ಸಾರ್ವಜನಿಕರ ಈ ಭಾವನೆಯನ್ನು ಗೌರವಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಇದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

    ತಾಲೂಕಿನ ಹಲವಾರು ಹಿರಿಯ ಕಾಂಗ್ರೆಸ್ ಮುಖಂಡರು, ಯುವ ನಾಯಕರು ಮತ್ತು ಕಾರ್ಯಕರ್ತರು ಸಹ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದು, ಜಿಲ್ಲಾ ಮಟ್ಟದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ. ಅನಿಲ್ ಚಿಕ್ಕಮಾದು ಅವರಿಗೆ ನ್ಯಾಯ ಸಿಗಲಿ ಎಂಬ ಘೋಷಣೆಯೊಂದಿಗೆ ಕಾರ್ಯಕರ್ತರು ಶೀಘ್ರದಲ್ಲೇ ಸಹಿ ಅಭಿಯಾನ, ಪೋಸ್ಟರ್ ಅಭಿಯಾನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬೃಹತ್ ಬೆಂಬಲ ಅಭಿಯಾನವನ್ನು ಆರಂಭಿಸಲಿದ್ದಾರೆ ಎಂದು ಆರ್ಯ ಮಹೇಶ್ ವಿವರಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗೌರವಾನ್ವಿತ ‘ಕನ್ನಡ ಜಂಗಮ’ ಪ್ರಶಸ್ತಿಗೆ…

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.