nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    ಜಿಲ್ಲಾ ಸುದ್ದಿ May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    By adminMay 31, 2026No Comments2 Mins Read

    ಸರಗೂರು: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಹಾಗೂ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ , ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಭೀಕರ ಕೊಲೆಯನ್ನು ಖಂಡಿಸಿ, ಸರಗೂರು ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮಹಿಳಾ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.

    ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಮಹಿಳಾ ಜಿಲ್ಲಾ ಸಂಚಾಲಕಿ ಕೋಟೆ ಅನುಷಾ ಅವರು, “ಉದಯೋನ್ಮುಖ ಕ್ರೀಡಾಪಟುವಾಗಿದ್ದ ಅಪ್ರಾಪ್ತ ಬಾಲಕಿಯನ್ನು ಕಿಡಿಗೇಡಿಗಳು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಅತ್ಯಂತ ನಿಕೃಷ್ಟ ಕೃತ್ಯವಾಗಿದೆ. ಬಂಧಿತನಾಗಿರುವ ಆರೋಪಿಯು ಯಾವುದೇ ಕಾರಣಕ್ಕೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳದಂತೆ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

    ಮಹಿಳಾ ಘಟಕದ ಮುಖಂಡ ಪೂರ್ಣಿಮಾ ಮಾತನಾಡಿ, “ಬಾಲಕಿಯ ಮೇಲಿನ ಈ ಕ್ರೂರ ದೌರ್ಜನ್ಯ ಮತ್ತು ಹತ್ಯೆ ಪ್ರಕರಣ ಇಡೀ ಮಾನವೀಯತೆಯೇ ತಲೆತಗ್ಗಿಸುವಂತೆ ಮಾಡಿದೆ. ದೇಶಕ್ಕೆ 75 ವರ್ಷಗಳ ಸ್ವಾತಂತ್ರ್ಯ ಸಿಕ್ಕಿದ್ದರೂ ಈ ನೆಲದ ಮೂಲ ನಿವಾಸಿಗಳ ಬದುಕು ಇನ್ನೂ ಶೋಚನೀಯವಾಗಿದೆ. ಒಂದೆಡೆ ದಲಿತ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದರೆ, ಇನ್ನೊಂದೆಡೆ ಮೇಲ್ವರ್ಗದವರ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಇಂತಹ ರಾಕ್ಷಸ ಕೃತ್ಯ ಎಸಗುವವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂಬ ಕಟ್ಟುನಿಟ್ಟಿನ ತನಿಖೆ ನಡೆಸಿ, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು,” ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ದಸಂಸ ಅಂಬೇಡ್ಕರ್ ವಾದ ಸಂಘಟನೆಯ ತಾಲೂಕು ಸಂಚಾಲಕ ಸಣ್ಣ ಕುಮಾರ್, ಮುಖಂಡರಾದ ಅನುಷಾ ಕೋಟೆ, ಪೂರ್ಣಿಮಾ ಮೈಸೂರು, ಜ್ಯೋತಿ, ಸುಮಾ, ರತ್ನ, ಗಂಗಾಬಾಯಿ, ಶಿರಮ್ಮ, ವೆಂಕಟಲಕ್ಷ್ಮಿ, ಸುಧಾ, ಸರೋಜಾ, ಶೈಲಾ, ಸುಧಾಮಣಿ, ಶಶಿಕಲಾ, ಜ್ಯೋತಿ, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.