ಪಾವಗಡ: ತಾಲೂಕಿನ ವಿವಿಧ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಾದ ಮೋರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಈ ನೇಮಕಾತಿ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಹುದ್ದೆಯ ವಿವರ: ಅತಿಥಿ ಶಿಕ್ಷಕರು (ಗೌರವಧನ ಆಧಾರಿತ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 4
ಅರ್ಜಿ ಸಲ್ಲಿಸಬೇಕಾದ ಸ್ಥಳ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಗಂಗಾಸಾಗರ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಜೂನ್ 4 ರೊಳಗೆ ಗಂಗಾಸಾಗರದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕಾಗಿ ಕೋರಲಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


