nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    ತುಮಕೂರು May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    By adminMay 31, 2026No Comments2 Mins Read

    ತುಮಕೂರು: ಪಾವಗಡದ ಹಿರಿಯ ಮುಖಂಡ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

    ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಹೃದಯಾಘಾತದಿಂದ ನಿಧನರಾದ ವೆಂಕಟರಮಣಪ್ಪ ಅವರ ಅಂತಿಮ ದರ್ಶನಕ್ಕಾಗಿ ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎನ್. ರಾಜಣ್ಣ, ಜಮೀರ್ ಅಹ್ಮದ್, ಕೆ.ಜೆ. ಜಾರ್ಜ್ ಹಾಗೂ ಸಂಸದ ಗೋವಿಂದ ಕಾರಜೋಳ ಸಾಥ್ ನೀಡಿದರು.


    Provided by
    Provided by

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, “ಹತ್ತು ದಿನಗಳ ಹಿಂದೆಯಷ್ಟೇ ವೆಂಕಟರಮಣಪ್ಪ ಅವರು ಚೆನ್ನಾಗಿದ್ದರು. ವೈ.ಎನ್. ಹೊಸಕೋಟೆಯ ಬೀರಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಹಣ ಕೇಳಲು ರಾಜಣ್ಣ, ವೆಂಕಟೇಶ್ ಅವರ ಜೊತೆ ನನ್ನ ಬಳಿ ಬಂದಿದ್ದರು. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ” ಎಂದು ಭಾವುಕರಾದರು.

    “ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ವೆಂಕಟರಮಣಪ್ಪ ಅವರಿಗೆ ಸಮಾಜದ ತಳಸಮುದಾಯಗಳ ಬಗ್ಗೆ ಅಪಾರ ಕಾಳಜಿ ಇತ್ತು. ಸಾಮಾಜಿಕ ನ್ಯಾಯದ ಬಗ್ಗೆ ದೊಡ್ಡ ಬದ್ಧತೆ ಹೊಂದಿದ್ದರು. ಅವರಿಗೆ ನನ್ನ ಮೇಲೆ ಅಪಾರ ಪ್ರೀತಿ, ಅಭಿಮಾನವಿತ್ತು. ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ಹಾಗೂ ಇಡೀ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟ” ಎಂದು ಕಂಬನಿ ಮಿಡಿದರು.

    “ಅವರು ಯಾವಾಗಲೂ ಅಹಿಂದ ವರ್ಗದ ಪರ ಧ್ವನಿಯಾಗಿದ್ದವರು. ಸ್ವತಃ ರೈತರಾಗಿದ್ದರಿಂದ ರೈತರ ಪರವಾಗಿ ಅಪಾರ ಕಾಳಜಿ ಹೊಂದಿದ್ದರು. ಅವರು ಇನ್ನೂ ಹತ್ತು ವರ್ಷ ಇರುತ್ತಾರೆ ಎಂದು ಭಾವಿಸಿದ್ದೆ. ಕಳೆದ ಚುನಾವಣೆಯಲ್ಲಿ ತಾವು ಸ್ಪರ್ಧಿಸದೆ ಮಗನನ್ನು ನಿಲ್ಲಿಸಿ ಗೆಲ್ಲಿಸಿದ್ದರು. ವೆಂಕಟರಮಣಪ್ಪ ಅವರಂತೆಯೇ ಅವರ ಮಗನೂ ಪ್ರಾಮಾಣಿಕವಾಗಿ ಜನಸೇವೆ ಮಾಡುವ ಪ್ರಯತ್ನ ಮಾಡುತ್ತಾರೆ ಎನ್ನುವ ನಂಬಿಕೆಯಿದೆ. ಭಗವಂತ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ” ಎಂದು ಪ್ರಾರ್ಥಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.