ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರಟಗೆರೆ ಯುವ ಮೋರ್ಚಾ ಅಧ್ಯಕ್ಷರಾಗಿ ದಾಸರಹಳ್ಳಿ ಚೇತನ್, ಪ್ರಧಾನ ಕಾರ್ಯದರ್ಶಿ ಮನೋಹರ್, ನಯನ ಕುಮಾರ್, ಎಸ್ ಸಿ ಮೋರ್ಚಾ ಅಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ರಾಮನಾಯ್ಕ, ಆನಂದ, ಎಸ್‌ಟಿ ಮೋರ್ಚಾ ಅಧ್ಯಕ್ಷ ನಾಗರಾಜು, ಪ್ರ.ಕಾ–ಸಿದ್ದರಾಜು, ಅಶ್ವತ್ಥಪ್ಪ, ಓಬಿಸಿ ಮೋರ್ಚಾ ಅಧ್ಯಕ್ಷ ಲೊಕೇಶ್, ಪ್ರ.ಕಾ–ಪುನೀತ್, ಮಹೇಶ್ ನೇಗಲಾಲ ಅವರನ್ನು ಆಯ್ಕೆ ಮಾಡಲಾಗಿದೆ.
ಕೊರಟಗೆರೆ ಬಿಜೆಪಿ ಮಂಡಲ ಉಪಾಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ಚೇತನಾರಾಧ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಕಾತ್ಯಾಯಿನಿ, ಪ್ರ.ಕಾ–ರೂಪಶ್ರೀ, ಗೀತಾ, ರೈತ ಮೋರ್ಚಾ ಅಧ್ಯಕ್ಷ ಮೋಹನ್.ಎ. ಪ್ರ.ಕಾ– ಸೂರ್ಯ ಪ್ರಕಾಶ್, ರವಿಕುಮಾರ್, ಅಲ್ಪ ಸಂಖ್ಯಾತರ ಮೋರ್ಚಾ ಅಧ್ಯಕ್ಷ ಇಂದ್ರ ಕುಮಾರ್, ಪ್ರ.ಕಾ- ಭವನ್ ಲಾಲ್, ಗೋವಿಂದ ಸಿಂಗ್ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


