ಪಾವಗಡ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ (SC/ST/BC) ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ಹತ್ತಿರದ ವಸತಿ ಶಾಲೆಗೆ ನೇರವಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.06.2026, ಬುಧವಾರ
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 21.06.2026, ಭಾನುವಾರ
ಹೆಚ್ಚಿನ ಮಾಹಿತಿ ಹಾಗೂ ಪ್ರವೇಶಾತಿಗೆ ಸಂಬಂಧಿಸಿದ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮೀಪದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮುಖ್ಯೋಪಾಧ್ಯಾಯರನ್ನು (ಹೆಡ್ ಮಾಸ್ಟರ್) ಸಂಪರ್ಕಿಸಲು ಕೋರಲಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


