ತುಮಕೂರು: ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 35ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡ, ಸರ್ಕಾರಿ ಕಾಂಪೌಂಡ್ ಗೋಡೆ, ಸರ್ಕಾರಿ ಇತರೆ ಕಟ್ಟಡಗಳು ಹಾಗೂ ಇತರೆ ಅಪಾಯಕಾರಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವುದು ಕಂಡು ಬಂದಲ್ಲಿ ಕೂಡಲೇ ತುಮಕೂರು ಮಹಾನಗರಪಾಲಿಕೆಗೆ ದೂರವಾಣಿ ಅಥವಾ ವಾಟ್ಸಾಪ್ ಮುಖಾಂತರ ಮಾಹಿತಿಯನ್ನು ನೀಡಬೇಕೆಂದು ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಸಗಿ ಶಾಲೆಯ ಕಾಂಪೌಂಡ್ ಮತ್ತು ಖಾಸಗಿ ಶಾಲೆಯ ಕಟ್ಟಡ, ಖಾಸಗಿ ಕಟ್ಟಡ ಹಾಗೂ ಖಾಸಗಿ ಕಟ್ಟಡದ ಕಾಂಪೌಂಡ್ ಗೋಡೆಗಳು ಶಿಥಿಲಾವಸ್ಥೆಯಲ್ಲಿದ್ದಲ್ಲಿ / ಅಪಾಯಕಾರಿ ಇದ್ದಲ್ಲಿ ಮಹಾನಗರಪಾಲಿಕೆಯ ಗಮನಕ್ಕೆ ತಂದು ಸ್ವಂತ ತಾವೇ ತೆರವುಗೊಳಿಸತಕ್ಕದ್ದು. ತಪ್ಪಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಅವಘಡಗಳು ಸಂಭವಿಸಿದ್ದಲ್ಲಿ ತಾವೇ ನೇರ ಜವಾಬ್ದಾರಿಯಾಗಿರುತ್ತೀರಿ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರವೀಣ್ ಕುಮಾರ್ ಎ. (ಮೊ.ಸಂ.9434843026), ಸುಮ ಎಸ್.ಬಿ.(ಮೊ.ಸಂ.8722309671), ಲಕ್ಕಿ (ಮೊ.ಸಂ. 8971881530) ಅಥವಾ ತುಮಕೂರು ಮಹಾನಗರಪಾಲಿಕೆ ಕಂಟ್ರೋಲ್ ರೂಂ ಮೊ.ಸಂ. 9449872599ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


