ತುಮಕೂರು: ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿರುವ ನಿಯೋಜಿತ ಸಿ ಎಂ ಡಿ.ಕೆ.ಶಿವಕುಮಾರ್, ಮುಂದಿನ ದಿನ ಗಳಲ್ಲಿ ಸರ್ಕಾರಿ ಹಾಗೂ ಗ್ರಾಮೀಣ ಭಾಗದ ಶಾಲೆಗಳಿಗೆ ಹೊಸ ರೂಪ ನೀಡುವುದಾಗಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯಾವುದೇ ಕೀಳರಿಮೆ ಬೇಡ. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳನ್ನು ರೂಪಾಂತರ ಗೊಳಿಸಲು ಈಗಾಗಲೇ ಯೋಜಿಸಲಾಗಿದೆ ಎಂದು ಹೇಳಿದರು.
ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭವಾಗಿದೆ. ವಿಶ್ವದ ಎಲ್ಲಾ ರಾಷ್ಟ್ರಗಳು, ಕರ್ನಾಟಕ ಮೂಲಕ ಭಾರತವನ್ನು ನೋಡುತ್ತಿವೆ, ಇಲ್ಲಿ ಉತ್ತಮ ಮಾನವ ಸಂಪನ್ಮೂಲ ಹಾಗೂ ಜ್ಞಾನ ಬಂಡಾರವಿದೆ ಎಂದಿದ್ದಾರೆ. ರಾಜ್ಯದಲ್ಲಿ ಮೂಲ ಶಿಕ್ಷಣ ಪಡೆದು ದೇಶ ವಿದೇಶಗಳಲ್ಲಿ ಲಕ್ಷಾಂತರ ಮಂದಿ ಉನ್ನತ ವ್ಯಾಸಂಗ ಮಾಡಿದ್ದಾರೆ. ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಉತ್ತಮವಾದ ವೈದ್ಯರು ವಕೀಲರು ಐಟಿ ತಂತ್ರಜ್ಞರು ಸೇರಿದಂತೆ ನಾನಾ ರೀತಿಯ ವೃತ್ತಿಪರರಿಗೆ ಕರ್ನಾಟಕ ಉತ್ತಮ ಸ್ಥಳವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ಇಸ್ರೋ ಸೇರಿದಂತೆ ಹಲವಾರು ಸಂಸ್ಥೆಗಳು ಎಚ್ ಎ ಎಲ್ ಒಳಗೊಂಡಂತೆ ಹಲವಾರು ಸಾರ್ವಜನಿಕ ಉದ್ಯಮಗಳು ನೆಲೆಯುರುವೆ ಎಂದು ಹೇಳಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


