nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    • ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
    • ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 
    • ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    ತುಮಕೂರು June 6, 2026

    ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್

    By adminJune 6, 2026No Comments2 Mins Read
    tumakuru

    ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ತುಮಕೂರು ನಗರದ ಅಮಾನಿಕೆರೆ ಗಾಜಿನಮನೆಯ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆಯನ್ನು ಇಂದು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಣೆಯನ್ನು ಮಾಡಲಾಯಿತು.

    ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್  ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರಾಗಿದ್ದವರು, ಇವರ ಆಳ್ವಿಕೆ 1902 ರಿಂದ 1940 ರವರೆಗೆ ರಾಜ್ಯಭಾರ ಮಾಡಿದಂತಹ ಮಹಾನ್ ನಾಯಕರು. ಶ್ರೀಯುತರು ಕೇವಲ 10 ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದ್ದು ಇದೀಗ ಇತಿಹಾಸವೆಂದು ತಿಳಿಸಿದರು.

    ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆಯು ನಮ್ಮ ರಾಜ್ಯಕ್ಕೆ ಅಪಾರವಾದದ್ದು ಅವರು ಕಾಲದಲ್ಲಿ ನಿರ್ಮಿತವಾದ ಹಲವಾರು ಸ್ಮಾರಕಗಳು, ಜೊತೆಗೆ ಈಗಿನ ಕೆ.ಆರ್. ಎಸ್ ಅಣೆಕಟ್ಟು ಸೇರಿದಂತೆ ವಿವಿಧ ಕೆರೆ ಕಟ್ಟೆಗಳ ಅಭಿವೃದ್ಧಿ, ಕೈಗಾರಿಕೆಗಳ ಸ್ಥಾಪನೆ, ಕರಕುಶಲ ವಸ್ತುಗಳ ತಯಾರಿಕಾ ಘಟಕಗಳ ಸ್ಥಾಪನೆ ಸೇರಿದಂತೆ ಆಗಿನ ಮೈಸೂರು ಸಂಸ್ಥಾನ (ಆಧುನಿಕ ಕರ್ನಾಟಕ ರಾಜ್ಯದ) ಸರ್ವತೋಮುಖದ ಅಭಿವೃದ್ಧಿಗೆ ಒಡೆಯರ್ ರವರ ಕೊಡುಗೆ ಅಪರಾವಾಗಿದ್ದು, ಅವರ ಕಾಲಘಟ್ಟದಲ್ಲಿಯೇ ಬುಡಕಟ್ಟು, ಪರಿಶಿಷ್ಠ ಜಾತಿ ಸೇರಿದಂತೆ ಅತ್ಯಂತ ತಳ ಸಮುದಾಯದವರೂ ಸಹ ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಅವಕಾಶ ಮಾಡಿಕೊಟ್ಟಂತಹವರಾಗಿದ್ದರು ಎಂದರು.

    ಆಗಿನ ಮೈಸೂರು ಸಂಸ್ಥಾನದಲ್ಲಿನ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ ಇದು ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವು ನಮ್ಮ ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ವತೋಮುಖ ಅಭಿವೃದ್ಧಿಯ ಹರಿಕಾರವೆಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಕಾರ್ಯಧ್ಯಕ್ಷರಾದ ತ್ಯಾಗರಾಜು ತಿಳಿಸಿದರು.

    ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಎಸ್.ಲಕ್ಷ್ಮೀನಾರಾಯಣ ಮಾತನಾಡುತ್ತಾ ಈಗಿನ ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆಯೆಂದರೆ ಅದಕ್ಕೆ ಮೂಲ ಕಾರಣ ಒಡೆಯರ್ ರವರು ಜೊತೆಗೆ ಅವರು ವಾಣಿಜ್ಯದ್ಯೋಮದ ಉದ್ದೇಶಕ್ಕಾಗಿ ನಮ್ಮ ರಾಜ್ಯದೇ ಒಂದು ಹಣಕಾಸು ಸಂಸ್ಥೆಯಿರಬೇಕೆಂದು ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿಸಿದ ಪ್ರಪ್ರಥಮ ವ್ಯಕ್ತಿ, ಜೊತೆಗೆ 1906ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳನ್ನು ಸಹ ಇವರ ಆದ್ವರ್ಯದಲ್ಲಿಯೇ ಪ್ರಾರಂಭಿಸಲಾಯಿತು ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಅಧ್ಯಕ್ಷರು ಎನ್.ಕೆ. ನಿಧಿ ಕುಮಾರ್, ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿ ಸದಸ್ಯರಾದ ರವಿಕುಮಾರ್ ಎನ್., ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ ಎಸ್., ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಟೈಲರ್ ಜಗದೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹರೀಶ್ ಕುಮಾರ್ ಡಿ., ಜಿಲ್ಲಾ ಕಾರ್ಯದರ್ಶಿ ತ್ಯಾಗರಾಜ್ ಕೆ., ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರಾದ ಹನುಮನರಸಯ್ಯ, ತಾಲೂಕು ಗೌರವಾಧ್ಯಕ್ಷರಾದ ಗಂಗಾಧರ್ ಜಿ.ಆರ್., ತುಮಕೂರು ನಗರ ಅಧ್ಯಕ್ಷರಾದ ದಿಬ್ಬೂರು ಶ್ರೀನಿವಾಸ್, ಪದಾಧಿಕಾರಿಗಳಾದ ಮಾರ್ಕೆಟ್ ಮಣ್ಣಪ್ಪ, ನಿರ್ವಹಣೆ ಲೇವೇಟ್ ವಿ.ಜಿ., ಯತ್ವಿಕ್ ಜೆ.  ನಾಯಕ್ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

    October 22, 2026

    Leave A Reply Cancel Reply

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಬೆಂಗಳೂರು: ಭಾರತದ ಎರಡನೇ ‘ವಂದೇ ಭಾರತ್ ಸ್ಲೀಪರ್’ ರೈಲು ಸೇವೆಯಾದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲನ್ನು ನವೆಂಬರ್ 1…

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.