ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ಸೇವಾಸಿಂಧು https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದರೆ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್‌ಗಳನ್ನು ನೀಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


