ತುಮಕೂರು: ಕೃಷಿಕ್ ಸರ್ವೋದಯ ಫೌಂಡೇಷನ್ (ರಿ) ವತಿಯಿಂದ ಐಬಿಪಿಎಸ್ ಸಂಸ್ಥೆ ನಡೆಸುವ ಪ್ರೊಬೆಷನರ್ ಆಫೀಸರ್ ಹುದ್ದೆಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉತ್ತಮ ಫಲಿತಾಂಶ ನೀಡಲು ನುರಿತ ವಿಷಯ ತಜ್ಞರಿಂದ ಜೂ.3ನೇ ವಾರದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ತರಗತಿಗಳನ್ನು ಆರಂಭಿಸಲಾಗುವುದು. ಸಂಸ್ಥೆಯು ಸುಸಜ್ಜಿತ ಗ್ರಂಥಾಲಯ, ವೈ–ಫೈ ಇಂಟರ್ನೆಟ್ ಹಾಗೂ ಪುರುಷ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒಳಗೊಂಡಿದೆ. ಅರ್ಹ ಅಭ್ಯರ್ಥಿಗಳು ಜೂ.15ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ: ಕೇಂದ್ರ ಕಚೇರಿ, ಕೃಷಿಕ್ ಸರ್ವೋದಯ ಫೌಂಡೇಷನ್ (ರಿ), ನಂ:15, 2ನೇ ಮಹಡಿ, ಹೆಚ್.ಎ.ಎಲ್ ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು-08, ದೂರವಾಣಿ 9449146200 / 7625000990 / ನ್ನು ಸಂಪರ್ಕಿಸುವಂತೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


