ತುಮಕೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (Hostels) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಯುಸಿ (PUC), ಸಮಾನಾಂತರ ಡಿಪ್ಲೋಮಾ ಹಾಗೂ ಐ.ಟಿ.ಐ (ITI) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಹಾಸ್ಟೆಲ್ ಪ್ರವೇಶಾವಕಾಶ ಇರಲಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಈ ಕೆಳಗಿನ ಮಿತಿಯೊಳಗಿರಬೇಕು:
ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST): ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು.
ಪ್ರವರ್ಗ- 2ಎ, 2ಬಿ, 3ಎ, 3ಬಿ: ವಾರ್ಷಿಕ ಆದಾಯ ₹1.00 ಲಕ್ಷ ಮಿತಿಯೊಳಗಿರಬೇಕು.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜೂನ್ 15ರ ಒಳಗಾಗಿ ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ.
ಅರ್ಜಿ ಸಲ್ಲಿಸಬೇಕಾದ ಅಧಿಕೃತ ಜಾಲತಾಣ: https://shp.karnataka.gov.in/bcwd
ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ: https://bcwd.karnataka.gov.in/
ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


