ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 8 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಟ್ಟೂರು ತಾಲೂಕು ಘಟಕದ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ದಸಂಸ ಅಧ್ಯಕ್ಷರಾದ ಬಿ. ಶಿವರಾಜ್ ಅವರು ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ವಂದನೆಗಳನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು. ತದನಂತರ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಮತ್ತು ಕಾರ್ಯಕರ್ತರು ಪ್ರೊಫೆಸರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ವಂದನೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ತಗ್ಗಿನಕೇರಿ ಕೊಟ್ರೇಶ್ ಮತ್ತು ವಕೀಲರಾದ ಟಿ. ಹನುಮಂತಪ್ಪ ಅವರು ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು, ಪ್ರೊಫೆಸರ್ ಬಿ. ಕೃಷ್ಣಪ್ಪನವರ ಸಮಾಜಮುಖಿ ಜೀವನ ಹಾಗೂ ಅವರು ದಲಿತ ಸಮುದಾಯದ ಏಳಿಗೆಗಾಗಿ ನಡೆಸಿದ ಧೀಮಂತ ಹೋರಾಟಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು.
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೋಡಿಹಳ್ಳಿ ಎನ್. ಭರ್ಮಣ್ಣ, ಕೊಟ್ಟೂರು ದಸಂಸ ಮಾಜಿ ಅಧ್ಯಕ್ಷರಾದ ಬೇವೂರ್ ಕೊಟ್ರೇಶ್, ಪತ್ರಕರ್ತರಾದ ಮಾರೇಶ್, ಕಂದಗಲ್ಲು ಕೊಲ್ಲೂರಪ್ಪ ಹಾಗೂ ಬಿ. ಕೆಂಚಪ್ಪ ಅವರು ಉಪಸ್ಥಿತರಿದ್ದರು. ಇವರೊಂದಿಗೆ ದಸಂಸ ತಾಲೂಕು ಘಟಕ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ವಿ.ಜಿ. ವೃಷಭೇಂದ್ರ, ಕೂಡ್ಲಿಗಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


