ತುಮಕೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಯಮಿತ (ಲಿಡ್‌ಕರ್) ವತಿಯಿಂದ ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 6 ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಲೇಔಟ್ (6ನೇ ಬ್ಲಾಕ್), ಉಲ್ಲಾಳು ಉಪನಗರ ಬಸ್ ನಿಲ್ದಾಣದ ಹತ್ತಿರವಿರುವ ‘ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಾಂತ್ರಿಕ ಸಂಸ್ಥೆ’ಯಲ್ಲಿ ಈ ಸ್ಪರ್ಧೆ ನಡೆಯಲಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿದ್ದಲಿಂಗಪ್ಪ ಬಿ. ಪೂಜಾರ್ ಅವರು ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


