ತುಮಕೂರು: ತುಮಕೂರಿನ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ (University College of Science) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಪದವಿ ಕೋರ್ಸ್‌ಗಳ ಉಳಿಕೆ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ವರ್ಷದ ಬಿ.ಎಸ್ಸಿ (B.Sc), ಬಿ.ಸಿ.ಎ (BCA) ಮತ್ತು ಬಿ.ಸಿ.ಎ ಡಾಟಾ ಸೈನ್ಸ್ [BCA (Data Science)] ಪದವಿಗಳ ಪ್ರವೇಶಾತಿಗೆ ಎರಡನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ತುಮಕೂರು ಯೂನಿವರ್ಸಿಟಿ ಜಾಲತಾಣ tumkuruniversity.ac.in ಅಥವಾ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ವೆಬ್‌ಸೈಟ್ ucst.ac.in ಗೆ ಭೇಟಿ ನೀಡಿ, UUCMS ಮುಖಾಂತರ ತಮ್ಮ ಆಯ್ಕೆಯ ಆದ್ಯತೆಯ ಅನುಕ್ರಮದಂತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಆನ್ ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿಯೊಂದಿಗೆ (Printout) ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಲಗತ್ತಿಸಿ, ಕಾಲೇಜಿನ ಕಚೇರಿಗೆ ಸಲ್ಲಿಸತಕ್ಕದ್ದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12–06–2026
- ಬಿ.ಸಿ.ಎ (BCA) ಎರಡನೇ ಸುತ್ತಿನ ಕೌನ್ಸಿಲಿಂಗ್ ದಿನಾಂಕ: 16–06–2026
- ಬಿ.ಎಸ್ಸಿ (B.Sc) ಎರಡನೇ ಸುತ್ತಿನ ಕೌನ್ಸಿಲಿಂಗ್ ದಿನಾಂಕ: 17–06–2026
ಸೀಟುಗಳ ಹಂಚಿಕೆಯನ್ನು ಸಂಪೂರ್ಣವಾಗಿ ಮೆರಿಟ್ ಮತ್ತು ರೋಸ್ಟರ್ (ಮೀಸಲಾತಿ) ಆಧಾರದ ಮೇಲೆ ನಿಯಮಾನುಸಾರ ನಡೆಸಲಾಗುವುದು. ಕೌನ್ಸಿಲಿಂಗ್‌ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಕ್ಷಣವೇ ಪ್ರವೇಶಾತಿ ಪಡೆಯಲು ಅವಕಾಶವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


