ತುಮಕೂರು: ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ ನಿರ್ವಹಣೆ ಸರಿಯಾಗಿ ಆಗದೆ ಸಾರ್ವಜನಿಕರು ಪರದಾಡುವಂತಾಗಿದೆ.
ಕುಣಿಗಲ್ ಮುಖ್ಯರಸ್ತೆಯ ಸದಾಶಿವ ನಗರದ 7 ಮುಖ್ಯರಸ್ತೆಯ SBI ಬ್ಯಾಂಕ್ ಪಕ್ಕದಲ್ಲಿ UGD ಮುಚ್ಚಳ ಓಪನ್ ಆಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತಿದೆ. ಓಪನ್ ಆಗಿರುವ ಚರಂಡಿಯಿಂದಾಗಿ ಯಾವುದೇ ಕ್ಷಣದಲ್ಲಾದರೂ ದೊಡ್ಡ ಅಪಘಾತ ಸಂಭವಿಸುವ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.
“ದಿನನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ಮಕ್ಕಳು, ವೃದ್ಧರು ಬೀಳುವ ಭಯದಲ್ಲೇ ಓಡಾಡಬೇಕಾಗಿದೆ. ಪಾಲಿಕೆಯವರಿಗೆ ಹಲವು ಬಾರಿ ಹೇಳಿದರೂ ಜಾಣಕುರುಡರಂತೆ ವರ್ತಿಸುತ್ತಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಹಲವು ರಸ್ತೆಗಳಲ್ಲಿ ಇದೇ ರೀತಿ UGD ಮುಚ್ಚಳಗಳು ಹಾನಿಗೊಂಡು ಅಪಾಯಕಾರಿಯಾಗಿ ಪರಿಣಮಿಸಿವೆ. ಕೂಡಲೇ ಮಹಾನಗರ ಪಾಲಿಕೆ ಎಚ್ಚೆತ್ತು, UGD ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


