ಪಾವಗಡ: ಬೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಜೂನ್ 2026ರ ಬಾಕಿ ಬಿಲ್ ವಸೂಲಿಗಾಗಿ ವಿಶೇಷ ಆಂದೋಲನಕ್ಕೆ ಚಾಲನೆ ನೀಡಲಾಗಿದೆ.
ಬಾಕಿ ಹಣ ಪಾವತಿಸದ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಡಿತಗೊಳಿಸಲಾಗುವುದು ಎಂದು ಕಾರ್ಯನಿರ್ವಾಹಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ. ಕರೆಂಟ್ ಕಟ್ ಆದ ನಂತರ ಅನಧಿಕೃತವಾಗಿ ಮರುಸಂಪರ್ಕ ಪಡೆದರೆ, ವಿದ್ಯುತ್ ಕಾಯ್ದೆ–2003ರ ಪ್ರಕಾರ ಕಠಿಣ ಕಾನೂನು ಕ್ರಮ ಜರುಗಲಿದೆ.
ಹಳೆಯ ಮತ್ತು ಪ್ರಸ್ತುತ ವಿದ್ಯುತ್ ಬಿಲ್ ಬಾಕಿಯನ್ನು ತಕ್ಷಣವೇ ಪಾವತಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ನಿರಂತರ ವಿದ್ಯುತ್ ಸೇವೆ ಬೇಕಾದರೆ ಇಂದೇ ಬಿಲ್ ಪಾವತಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಗ್ರಾಹಕರು ಸಮೀಪದ ಬೆಸ್ಕಾಂ ಕಚೇರಿಯನ್ನು ಸಂಪರ್ಕಿಸಬಹುದು.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


