ಕೊರಟಗೆರೆ : ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜು (ಕೋಡ್: UU 0316), ಕೊರಟಗೆರೆ, 2025-26ನೇ ಶೈಕ್ಷಣಿಕ ಸಾಲಿನ ಪಿಯು ಬೋರ್ಡ್ ಹಾಗೂ KCET–2026 ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ.
ಕಾಲೇಜು 100% ಫಲಿತಾಂಶ ದಾಖಲಿಸಿದ್ದು, ಅಮೂಲ್ಯ ಎಸ್. 570 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶ್ರೀವತ್ಸ 556 ಅಂಕ ಹಾಗೂ ಸುಭಾಷ್ ಎಸ್.ಜಿ. 555 ಅಂಕಗಳನ್ನು ಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ.
KCET–2026 ಪರೀಕ್ಷೆಯಲ್ಲಿ ಸುಭಾಷ್ ಎಸ್.ಜಿ. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 9,828ನೇ ರ್ಯಾಂಕ್ ಗಳಿಸಿ ಕೊರಟಗೆರೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಪಶುವೈದ್ಯಕೀಯ ವಿಜ್ಞಾನದಲ್ಲಿ 4,102ನೇ, ನರ್ಸಿಂಗ್‌ನಲ್ಲಿ 4,111ನೇ ಹಾಗೂ ಕೃಷಿ ಮತ್ತು ಫುಡ್ ಸೈನ್ಸ್ ವಿಭಾಗಗಳಲ್ಲಿ 4,732ನೇ ರ್ಯಾಂಕ್ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಶ್ರೀವತ್ಸ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,457ನೇ ರ್ಯಾಂಕ್ ಹಾಗೂ ಅಮೂಲ್ಯ ಎಸ್. ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 28,532ನೇ ರ್ಯಾಂಕ್ ಪಡೆದು ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ. ಇದರೊಂದಿಗೆ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್, ನರ್ಸಿಂಗ್, ಕೃಷಿ, BPT ಹಾಗೂ ಇತರ ವೃತ್ತಿಪರ ಕೋರ್ಸ್‌ಗಳಿಗೆ ಅರ್ಹತೆ ಪಡೆದಿದ್ದಾರೆ.
ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ ಹಾಗೂ ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.
“ನಮ್ಮ ವಿದ್ಯಾರ್ಥಿಗಳ ಸಾಧನೆಯೇ ನಮ್ಮ ಹೆಮ್ಮೆ; ಅವರ ಯಶಸ್ಸೇ ನಮ್ಮ ಗುರಿ” ಎಂಬ ಧ್ಯೇಯದೊಂದಿಗೆ ಕಾಲೇಜು ಮುಂದುವರಿಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


