nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    ಕುಣಿಗಲ್ June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    By adminJune 12, 2026No Comments2 Mins Read

    ಕುಣಿಗಲ್ : ತಾಲ್ಲೂಕಿನ ಕಸಬಾ ಹೋಬಳಿ ಟಿ ಹೊಸಹಳ್ಳಿ ಗ್ರಾಮ ವ್ಯಾಪ್ತಿಯ ವ್ಯಾಪ್ತಿಯಲ್ಲಿ  ಸುಮಾರು 5 ಕೋಟಿ ರೂ.ಗಳ ವೆಚ್ಚದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ  ನೆರವೇರಿಸಿದರು.

    ಅವರು ಟಿ.ಹೊಸಳ್ಳಿ, ಗಿರಿಗೌಡರ ಪಾಳ್ಯ, ಹಾಗೂ ಸಾಲಂದ್ರಿ ಪಾಳ್ಯ, ಗ್ರಾಮಗಳಿಗೆ ರಸ್ತೆ ಚರಂಡಿ ನಿರ್ಮಾಣಕ್ಕೆ ಸುಮಾರು 5 ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ ಮಾಡಿ ಮಾತನಾಡುತ್ತಾ, ನಾನು ಶಾಸಕನಾದ ನಂತರ ಮತದಾರರ ಋಣವನ್ನು ತಿಳಿಸಲು ತಾಲ್ಲೂಕಿನಾದ್ಯಂತ ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಬಂದಿದ್ದೇನೆ ಇನ್ನು ಮುಂದೆಯೂ ಸರ್ಕಾರದಿಂದ  ವಿಶೇಷ ಅನುದಾನ ತಂದು ಹಿಂದುಳಿದ ಗ್ರಾಮಗಳನ್ನು ಗುರುತಿಸಿ ರಸ್ತೆ, ನೀರಾವರಿ ಕಾಮಗಾರಿಗೆ ಹೆಚ್ಚಿನ ಮಹತ್ವವನ್ನು ಕೊಟ್ಟು ತಾಲ್ಲೂಕನ್ನು ಅಭಿವೃದ್ಧಿ ಪಡಿಸಲು ಕಂಕಣ ಬದ್ದನಾಗಿದ್ದೇನೆ ಎಂದರು.


    Provided by
    Provided by

    ರಾಜ್ಯದಲ್ಲಿ ಕಸ ವಿಲೇವಾರಿ ಸಂಬಂಧ ವಿರೋಧ ಪಕ್ಷಗಳು ಉರುಳಿಲ್ಲದ ಆರೋಪವನ್ನು ಮಾಡುತ್ತಾರೆ, ಗೃಹಲಕ್ಷ್ಮಿ ಯೋಜನೆಯನ್ನು ನಿಜವಾದ ಫಲಾನುಭವಿಗಳು ತೆಗೆದುಕೊಳ್ಳಲಿ ಎಂಬ ಸದುದ್ದೇಶದಿಂದ ಬಯೋ ಮೆಟ್ರಿಕ್ ಅಳವಡಿಸಲು ಸರ್ಕಾರ ಮುಂದಾಗಿದೆ ಇದರಿಂದ ಅನರ್ಹ ಫಲಾನುಭವಿಗಳನ್ನು ಗುರ್ತಿಸಿದರೆ ಪ್ರತಿ ತಿಂಗಳು ಸರ್ಕಾರಕ್ಕೆ ಸುಮಾರು 100 ಕೋಟಿ ರೂ. ಗಳು  ಉಳಿತಾಯವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಹಣವನ್ನು ಬೇರೆ ಕೆಲಸಗಳಿಗೆ ಉಪಯೋಗಿಸಬಹುದು  ಆದ್ದರಿಂದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿದೆ ಯೋಜನೆಯನ್ನು ಶ್ರೀಮಂತರು  ಕೂಡ ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

    ಆರ್ಥಿಕವಾಗಿ ಸಬಲರಾಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯಿಂದ ಹೊರ ಬಂದರೆ, ಎಷ್ಟೋ ಬಡ ಕುಟುಂಬದ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದರು.

    ಮತಪಟ್ಟಿ ಪರಿಷ್ಕರಣೆ (ಎಸ್ ಐಆರ್) ಸಂಬಂಧ ಕೇಂದ್ರದ  ಬಿಜೆಪಿ ಸರ್ಕಾರ ಬಡವರನ್ನು ದೀನ ದಲಿತರನ್ನು ಮುಸಲ್ಮಾನವನ್ನು, ಅಲ್ಪಸಂಖ್ಯಾತರನ್ನು, ಮತ ಪಟ್ಟಿಯಿಂದ ತೆಗೆಯಲು ಪ್ರಯತ್ನ ಮಾಡುತ್ತಿದೆ ನಾವುಗಳು ದಡ್ಡರಲ್ಲ ನಮ್ಮಲ್ಲಿ ಬುದ್ಧಿವಂತರಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರಿಶೀಲನೆ ಮಾಡುತ್ತೇವೆ ಮತದಾರರು ಕೂಡ ಈ ವಿಚಾರವಾಗಿ ಜಾಗೃತೆಯಿಂದ ಇರಬೇಕೆಂದರು. ಬಿಜೆಪಿ ಪಕ್ಷ  ಪಶ್ಚಿಮ ಬಂಗಾಳದಲ್ಲಿ ಟಿ ಎಂ ಸಿ ಪಕ್ಷವನ್ನು ಸೋಲಿಸಲೇಬೇಕು ಎಂಬ ಉನ್ನಾರ ಮಾಡಿ  ಬಡವರನ್ನು, ದಿನ ದಲಿತರನ್ನ, ಮುಸಲ್ಮಾನ್, ಅಲ್ಪಸಂಖ್ಯಾತರನ್ನು, ಮತದಾರರ ಪಟ್ಟಿಯಿಂದ ಹೆಸರು ತೆಗೆದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಸೋತು ಬಿಜೆಪಿ ಪಕ್ಷ ಜಯ ಸಾಧಿಸಿತು. ಆ ಕುತಂತ್ರ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ ಬಿಜೆಪಿ ಸರ್ಕಾರ ಶ್ರೀರಾಮ, ಹನುಮಂತ, ಇನ್ನಿತರ ದೇವರ ಹೆಸರುಗಳನ್ನು ಹೇಳುತ್ತಾ 370 ಆಕ್ಟ, ಎನ್ ಆರ್ ಆರ್ ಐ, ಕಾನೂನು ಒಳಗೊಂಡಂತೆ ಜನರಿಗೆ  ಇನ್ನಿತರ ಬೇಡವಾದ ಕಾನೂನುಗಳನ್ನು ಜಾರಿಗೆ ತಂದು ರಾಷ್ಟ್ರದ ಜನರನ್ನು ದಿಕ್ಕು ತಪ್ಪಿಸಿ  ಬಿಜೆಪಿ ಪಕ್ಷ ಚುನಾವಣೆಯಲ್ಲಿ ಗೆಲ್ಲುವ ಹೊಸತಂತ್ರ ರೂಪಿಸುತ್ತಿದೆ  ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪಿ ಡಿ ಓ ನರಸಿಂಹಮೂರ್ತಿ, ಇಂಜಿನಿಯ ನಂದೀಶ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜು, ಗುತ್ತಿಗೆದಾರರಾದ ಉಮೇಶ್ (ಗುಂಡಣ್ಣ) ಚಿಕ್ಕಣ್ಣ, ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ

    May 30, 2026

    ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ

    May 21, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.