nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    ಕೊರಟಗೆರೆ June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    By adminJune 12, 2026No Comments2 Mins Read
    lokayukta
    ಕೊರಟಗೆರೆ ತಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ.

    ಕೊರಟಗೆರೆ: ಗ್ರಾಮೀಣ ಭಾಗದಿಂದ ಸಮಸ್ಯೆಗಳನ್ನ ತರುವ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿವರ್ಗ ಬಗೆಹರಿಸಿದ್ರೇ ಲೋಕಾಯುಕ್ತ ಇಲಾಖೆಗೆ ಅರ್ಜಿಗಳೇ ಬರೋದಿಲ್ಲ. ಜನಸಾಮಾನ್ಯರ ಅರ್ಜಿಗಳನ್ನು ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಜವಾಬ್ದಾರಿ ಎಂದು ತುಮಕೂರು ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ ಕಿವಿಮಾತು ಹೇಳಿದರು.

    ಕೊರಟಗೆರೆ ಪಟ್ಟಣದ ತಾಪಂ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದುಕೊರತೆ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಕಲ್ಲುಕ್ವಾರೆ ಮತ್ತು ಕಲ್ಲುಬಂಡೆ ಬ್ಸಾಸ್ಟ್ನಿಂದ ಬುಕ್ಕಾಪಟ್ಟಣ ರೈತರಿಗೆ ಸಮಸ್ಯೆ, ರೈತರ ಜಮೀನು ದಾಖಲೆ ಇಲ್ಲದೇ ಅಕ್ರಮವಾಗಿ ಪರಬಾರೇ, ಸುವರ್ಣಮುಖಿ ನದಿಯ ಒತ್ತುವರಿ, ರೇಷನ್ ಕಾರ್ಡಿಗಾಗಿ ಅಲೆದಾಟ, ಮನೆಗಳ ಇಸ್ವತ್ತು ಸಮಸ್ಯೆ, ಸಾಗುವಳಿ ಚೀಟಿಯಿಂದ ಪಹಣಿ, ರೈತರ ಜಮೀನು ಸರ್ವೆಗೆ ಮೀನಾಮೇಷ ಸೇರಿದಂತೆ ಹತ್ತಾರು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನ ಸೆಳೆದವು.

    ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧ್ಯಕ್ಷ ಡಾ.ಸಂತೋಷ್, ಪೊಲೀಸ್ ಉಪಾಧ್ಯಕ್ಷ ಮಂಜುನಾಥ, ನಿರೀಕ್ಷಕ ರಾಜು.ಟಿ, ತಹಶೀಲ್ದಾರ್ ಮಂಜುನಾಥ, ತಾಪಂ ಇಓ ಅಪೂರ್ವ, ಸಿಪಿಐ ಪುರುಷೋತ್ತಮ್, ಪುರಸಭೆ ಸಿಇಓ ಉಮೇಶ್, ಸಮಾಜ ಕಲ್ಯಾಣ ಯಮುನಾ, ಸಿಡಿಪಿಓ ಗಂಗಾಧರ್, ಕೆಆರ್‌ಐಡಿಎಲ್ ಎಇಇ ಸಿಂಧು, ಬಿಸಿಎಂ ಅನಂತರಾಜು ಸೇರಿದಂತೆ ಇತರರು ಇದ್ದರು.

    56 ಜನರಿಂದ ಅರ್ಜಿಗಳು ಸ್ವೀಕಾರ:

    ಜಮೀನು ಸರ್ವೆ, ನದಿ–ರಸ್ತೆ ಒತ್ತುವರಿ, ಅಕ್ರಮ ಕಟ್ಟಡಗಳ ನಿರ್ಮಾಣ, ಪಡಿತರ ಚೀಟಿ ಸಮಸ್ಯೆ, ಗ್ರಾಪಂ ಇಸ್ವತ್ತು, ಕಲ್ಲುಕ್ವಾರೆ ಶಬ್ದ, ಮಾಹಿತಿನೇ ನೀಡೋದಿಲ್ಲ, ಪಹಣಿ ಸಮಸ್ಯೆ, ಸಾಗುವಳಿ ಚೀಟಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಆಹಾರ, ಸರ್ವೆ, ಕಂದಾಯ, ಗ್ರಾಪಂಗೆ ಸೇರಿದ ೫೬ಜನರಿಂದ ಸಮಸ್ಯೆಗಳ ಅರ್ಜಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿ ಕೆಲವನ್ನು ಸ್ಥಳದಲ್ಲೇ ಬಗೆಹರಿಸಿ ಇನ್ನೂಳಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ನದಿ ಒತ್ತುವರಿ ತೆರವಿಗೆ ಮೀನಾಮೇಷ:

    ಕೊರಟಗೆರೆ ಪಟ್ಟಣದಲ್ಲಿ ಹಾದುಹೋಗುವ ಸುವರ್ಣಮುಖಿ ನದಿಯು ಮುಕ್ಕಾಲು ಭಾಗದಷ್ಟು ಜಮೀನು ಖಾಸಗಿ ವ್ಯಕ್ತಿಗಳ ಒತ್ತುವರಿಗೆ ಬಲಿಯಾಗಿದೆ. ಇದರಲ್ಲಿ ಖಾಸಗಿ ಕಟ್ಟಡಗಳನ್ನ ನಿರ್ಮಿಸಿಕೊಂಡಿರುತ್ತಾರೆ ಹನುಮಂತಪುರ ಸರ್ವೆ ನಂ.17, 18ಮತ್ತು ೧೯ ಅಕ್ರಮವಾಗಿ 160 ಕ್ಕೂ ಅಧಿಕ 2012 ಕೂಡ ಅನುಮತಿ ಪಡೆದು ಇಲ್ಲಿಯವರೆಗೂ ಕಾಮಗಾರಿ ಪೂರ್ಣಗೊಳ್ಳದೆ ಅನಧಿಕೃತವಾಗಿ ಇಸ್ವತ್ತು ಮಾಡಲಾಗಿದೆ ಮತ್ತು ಬೋಡಬಂಡೇನಹಳ್ಳಿ ಸರ್ವೆ ನಂ.೪೪ರಲ್ಲಿ ಅಕ್ರಮವಾಗಿ ಹತ್ತಾರು ಎಕರೇ ಅಕ್ರಮ ವಾಗಿ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಮಾಡಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಹಾಗೂ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ಭೂಕಬಳಿಕೆ ನ್ಯಾಯಮಂಡಳಿಗೆ ದೂರು ನೀಡಿ ಕ್ರಮ ಕೈಗೊಳ್ಳದೆ ಹೋದರೆ ತಾಲೂಕು ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

    ಮಠದ ಆಸ್ತಿ ಅಕ್ರಮ ಪರಬಾರೆ:

    ಮುಜರಾಯಿ ಇಲಾಖೆಯ ಮಠದ ಧಾರ್ಮಿಕ ಕಾರ್ಯಗಳಿಗೆ ನೀಡಿದ ಕೋಡ್ಲಹಳ್ಳಿಯ ಬಳ್ಳಾರಿ ಉಜ್ಜಯಿನಿ ಪೀಠದ ಖಾಸಾ ಶಾಖಾ ಸತ್ಯಧರ್ಮದ ಮಠದ ಸುಮಾರು 18 ಎಕರೇ ಇನಾಂ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮತ್ತು ಕೋಡ್ಲಹಳ್ಳಿಯಲ್ಲಿ ಇಲ್ಲದೇ ಇರುವ ದೇವರ ಹೆಸರಿನಲ್ಲಿ 15 ಕೋಟಿಗೂ ಅಧಿಕ ತಸ್ತಿಕ್ ಹಣವನ್ನು ಬೆಂಗಳೂರಿನ ಉತ್ತಾರಾಧಿ ಮಠಕ್ಕೆ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೈಕೋರ್ಟ್ ವಕೀಲ ಪರಮೇಶಾರಾಧ್ಯ ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.