ಮಂತ್ರಾಲಯ: ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ ದರ್ಶನ” ಆಲ್ಬಮ್ ಸಾಂಗ್ ಬಿಡುಗಡೆ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆದಿವೆ.
ಈ ಮಹತ್ವದ ಕಾರ್ಯಕ್ರಮಕ್ಕೆ ಆಗಮಿಸುವಂತೆ ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಭಕ್ತಿಪೂರ್ವಕವಾಗಿ ಆಹ್ವಾನ ನೀಡಲಾಗಿದೆ. ಮಂತ್ರಾಲಯದ ಶ್ರೀಗಳ ಪೂರ್ವಾಶ್ರಮದ ಪುತ್ರಿ ಶ್ರೀಮತಿ ಅಭಿಜ್ಞಾ ಹಾಗೂ ಅಳಿಯ ಶ್ರೀಶಾಜೋಯ್ ಅವರು ಕಾಡು ಸಿದ್ದೇಶ್ವರ ಮಠದ ಶ್ರೀಗಳನ್ನು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿದರು.
ಆಹ್ವಾನ ನೀಡುವ ಈ ಸಂದರ್ಭದಲ್ಲಿ ಪ್ರಮುಖರಾದ ರಘು ಭಟ್, ಸುಗುಣ ರಘು ಭಟ್, ಕಿರುತೆರೆ ನಟ ತಿಪಟೂರು ದಯಾನಂದ ಸಾಗರ್ ಹಾಗೂ ನೊಣವಿನಕೆರೆ ಶಂಕ್ರಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜೂನ್ 26ರಂದು ನಡೆಯಲಿರುವ ಈ ಆಲ್ಬಮ್ ಬಿಡುಗಡೆ ಸಮಾರಂಭವು ಧಾರ್ಮಿಕ ಮತ್ತು ಸಾಂಸ್ಕೃತಿಕ ಲೋಕದ ಗಣ್ಯರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


