nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    ಕೊರಟಗೆರೆ June 13, 2026

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    By adminJune 13, 2026No Comments2 Mins Read
    koratagere

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಕೊರಟಗೆರೆ ಬೆಸ್ಕಾಂ ಉಪ ವಿಭಾಗದ ಕಚೇರಿ ಮುಂದೆ ಬೆಸ್ಕಾಂ ನೌಕರರು ಹಾಗೂ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಬೃಹತ್ ಪ್ರತಿಭಟನೆ ನಡೆಸಿದವು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೊರಟಗೆರೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ. ಪ್ರಸನ್ನ ಕುಮಾರ್, “ಕೇಂದ್ರ ಸರ್ಕಾರವು ವಿದ್ಯುತ್ ಪ್ರಸರಣ ಹಾಗೂ ಸರಬರಾಜು ನಿಗಮಗಳನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಜಾರಿ ಮಾಡಲು ಹೊರಟಿರುವ ‘ವಿದ್ಯುತ್ ತಿದ್ದುಪಡಿ ಕಾಯ್ದೆ–೨೦೨೬’ ಅನ್ನು ತಕ್ಷಣವೇ ವಾಪಸ್ ಪಡೆಯಬೇಕು. ಬೆಸ್ಕಾಂ ಸೇರಿದಂತೆ ರಾಜ್ಯದ ಇನ್ನಿತರ ವಿದ್ಯುತ್ ಪ್ರಸರಣಾ ಕೇಂದ್ರಗಳು ಸಾವಿರಾರು ಕೋಟಿ ಮೌಲ್ಯದ ಸಾರ್ವಜನಿಕ ಆಸ್ತಿಯಾಗಿದೆ. ಬೃಹತ್ ಸೌಕರ್ಯ, ಉಪ ಕೇಂದ್ರಗಳು ಹಾಗೂ ಯಂತ್ರೋಪಕರಣಗಳನ್ನು ಹೊಂದಿರುವ ಈ ಸಂಸ್ಥೆಗಳ ಮೂಲಕ ನೌಕರರು ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಹೀಗಿದ್ದೂ ಇದನ್ನು ಖಾಸಗಿ ಕಂಪನಿಗಳಿಗೆ ವಹಿಸಲು ಹೊರಟಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

    “ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ನೀಡಿದರೆ ಅವರು ಸ್ಮಾರ್ಟ್ ಮೀಟರ್‌ ಗಳನ್ನು ಅಳವಡಿಸಿ, ಮೊಬೈಲ್ ಕಂಪನಿಗಳಂತೆ ಪ್ರಿಪೇಯ್ಡ್ ಅಥವಾ ಪೋಸ್ಟ್ ಪೇಯ್ಡ್ ವ್ಯವಸ್ಥೆ ತರುತ್ತಾರೆ. ಇದರಿಂದಾಗಿ ಬಡವರು, ಕೂಲಿ ಕಾರ್ಮಿಕರು, ವೃದ್ಧರು ಹಾಗೂ ರೈತರಿಗೆ ಸಿಗುತ್ತಿದ್ದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸೇರಿದಂತೆ ಉಚಿತ ವಿದ್ಯುತ್ ಯೋಜನೆಗಳು ಮುಂದಿನ ದಿನಗಳಲ್ಲಿ ರದ್ದಾಗಲಿವೆ. ಆದ್ದರಿಂದ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗಿಯವರಿಗೆ ವಹಿಸಬಾರದು” ಎಂದು ಪ್ರಸನ್ನ ಕುಮಾರ್ ಒತ್ತಾಯಿಸಿದರು.

    ಮೊಬೈಲ್‌ ನಂತೆ ಕರೆನ್ಸಿ ಹಾಕಿಸುವ ಪರಿಸ್ಥಿತಿ ಬರಲಿದೆ: ಕೆ.ವಿ. ನಟರಾಜು

    ಕೊರಟಗೆರೆ ಉಪವಿಭಾಗದ ನೌಕರರ ಸಂಘದ ಕಾರ್ಯದರ್ಶಿ ಕೆ.ವಿ. ನಟರಾಜು ಮಾತನಾಡಿ, “ವಿದ್ಯುತ್ ವ್ಯವಸ್ಥೆ ಖಾಸಗೀಕರಣಗೊಂಡರೆ ಮೊಬೈಲ್ ಸೇವೆಗಳಂತೆ ಹಣ ಪಾವತಿಸಿ ಕರೆನ್ಸಿ ಹಾಕಿಸಿಕೊಂಡೇ ವಿದ್ಯುತ್ ಬಳಸಬೇಕಾದ ಕಠಿಣ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ರೈತರ ಕೊಳವೆಬಾವಿಗಳಿಗೆ ಉಚಿತ ವಿದ್ಯುತ್ ಸಿಗದೆ ಕೃಷಿ ಕ್ಷೇತ್ರ ಸಂಪೂರ್ಣ ನಾಶವಾಗಲಿದೆ. ಸರ್ಕಾರ ತಕ್ಷಣವೇ ಖಾಸಗೀಕರಣದ ನಿರ್ಧಾರವನ್ನು ಕೈಬಿಡಬೇಕು” ಎಂದರು.

    ಈ ಮಹತ್ವದ ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ೬೫೯ ನೌಕರರ ಸಂಘದ ಅಧಿಕ ಕಾರ್ಯದರ್ಶಿ ಹೆಚ್. ತಿಮ್ಮಪ್ಪ, ಉಪಾಧ್ಯಕ್ಷ ಲಕ್ಷ್ಮೀಕಾಂತ್, ಕೊರಟಗೆರೆ ಉಪ ವಿಭಾಗದ ನೌಕರರ ಸಂಘದ ಅಧ್ಯಕ್ಷ ಹೆಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಕೆ.ವಿ. ನಟರಾಜು, ಸುನಿಲ್‌ ಕುಮಾರ್, ಸಹಾಯಕ ಇಂಜಿನಿಯರ್ ಯೋಗೀಶ್, ಕಿರಿಯ ಇಂಜಿನಿಯರ್ ಮಲ್ಲಯ್ಯ, ಕಂದಾಯ ಶಾಖೆಯ ಜೆ.ಡಿ. ರಾಘವೇಂದ್ರ, ಕೆ.ವಿ. ಮಂಜುಳಾ, ಫಾತಿಮಾ ಭಾಗವಹಿಸಿದ್ದರು.

    ಅಲ್ಲದೆ, ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಲಕ್ಷ್ಮೀಕಾಂತ ಬಾಬು, ಮೂಡ್ಲಗಿರಿಯಪ್ಪ, ಗೋವಿಂದರಾಜು, ವೆಂಕಟೇಶ್, ಹೊಸಕೋಟೆ ಮುತ್ತುರಾಜ್ ಸೇರಿದಂತೆ ಬೆಸ್ಕಾಂ ನೌಕರರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ರೈತ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿ ಖಾಸಗೀಕರಣದ ವಿರುದ್ಧ ತಮ್ಮ ಬೆಂಬಲ ವ್ಯಕ್ತಪಡಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.