ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ (ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಮಿತಿಯೊಳಗಿರಬೇಕು.
ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗಾಗಿ ತಮ್ಮ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0816–2251736 ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


