ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೊಡ್ಲಹಳ್ಳಿ ಅಶ್ವಥ ನಾರಾಯಣ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್ ತಿಳಿಸಿದ್ದಾರೆ.
ಪಟ್ಟಣದ ರಾಜೀವ ಭವನದಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಅಭಿಮಾನಿಗಳಿಂದ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ನಾಳೆ ಬೆಳಗ್ಗೆ 10 ಗಂಟೆಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದು ಎಲ್ಲಾ ಮತ ಬಾಂಧವರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ್ದಾರೆ.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಡಾ.ಜಿ. ಪರಮೇಶ್ವರ ರವರನ್ನು ಸಮಾರಂಭಕ್ಕೆ ಮುಂಚಿತವಾಗಿ ಹೂವಿನ ರಥದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಟ್ ನಿಲ್ದಾಣದಿಂದ ಪದವಿ ಪೂರ್ವ ಕಾಲೇಜು ಮೈದಾನದ ವರೆಗೆ ವಿವಿಧ ಜಾನಪದ ತಂಡಗಳು, ಕುಂಭ ಕಳಶಗಳು ಹೊತ್ತು ಸಾವಿರಾರು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮತದಾರರಿಂದ ಬೃಹತ್ ಮೆರವಣಿಗೆಯನ್ನು ನಡೆಸಲಾಗುವುದು ಎಂದರು.
ಕೆ.ಪಿ.ಸಿ.ಸಿ ಸದಸ್ಯ ಎ.ಡಿ. ಬಲರಾಮಯ್ಯ ಮಾತನಾಡಿ, ಡಾ.ಜಿ.ಪರಮೇಶ್ವರ ಕೊರಟಗೆರೆ ಕ್ಷೇತಕ್ಕೆ ಬಂದು ಶಾಸಕರಾದ ಮೇಲೆ 8 ವರ್ಷಗಳ ಅವಧಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ, ಎರಡು ಬಾರಿ ಉಪ ಮಖ್ಯಮಂತ್ರಿಗಳು, 3 ಬಾರಿ ಗೃಹ ಸಚಿವರು ಕೆಲಸ ಮಾಡಿದ್ದು, ಕೊರಟಗೆರೆ ಮತ ಬಾಂಧವರು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಾದ ಮಹಾಲಿಂಗಪ್ಪ ಮಾತನಾಡಿ ಅಭಿನಂದನಾ ಸಮಾರಂಭಕ್ಕೆ ಬರುವ ಸಮಸ್ತ ಜನರಿಗೆ ಉಪಹಾರದ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ನಮ್ಮ ಕ್ಷೇತ್ರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಅಧ್ಯಕ್ಷೆ ಜಯಮ್ಮ, ವೆಂಕಟೇಶ್ ಮೂರ್ತಿ, ಎಲ್.ರಾಜಣ್ಣ, ರುದ್ರಪ್ರಸಾದ್, ನರಸಮ್ಮ ನರಸಿಂಹಮೂರ್ತಿ, ಸೈಯದ್ ಸೈಪುಲ್ಲಾ, ಟಿ.ಸಿ.ರಾಮಣ್ಣ, ಜಯರಾಮ್, ವಿನಯ್ ಕುಮಾರ್, ಅರವಿಂದ್, ಲಕ್ಷಮ್ಮ, ಮಲ್ಲಣ್ಣ, ಹನುಮಂತರಾಜು, ಬೈರೇಶ್, ದೀಪಕ್, ರಘುವೀರ್, ಸೂಪಿಯಾನ್, ದೇವರಾಜು, ಸೋಮೇಶ್, ಭರತ್, ರವಿ, ರಮೇಶ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


