ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಜೂ.16 ರಂದು 2069ನೆ ಮದ್ಯ ವರ್ಜನ ಶಿಬಿರವನ್ನು ಏರ್ಪಡಿಸಲಾಗಿದೆ.
ಜೂ.16 ರಿಂದ 23ರವರೆಗೆ ಶಿಬಿರವು ನಡೆಯಲಿದ್ದು, ಜೂ.16ರಂದು ಬೆಳಿಗ್ಗೆ 11 ಗಂಟೆಗೆ ಶಿಬಿರವನ್ನು ನಗರಸಭೆಯ ಅಧ್ಯಕ್ಷ ಜೀಶಾನ್ ಮೊಹಮೂದ್ ಉದ್ಘಾಟಿಸುವರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ರಾಮಚಂದ್ರಗುಪ್ತ ಅಧ್ಯಕ್ಷತೆ ವಹಿಸುವರು.
ವಿಪ ಸದಸ್ಯ ಚಿದಾನಂದ್ ಎಂ.ಗೌಡ, ಮಾಜಿ ಶಾಸಕ ಡಾ.ಸಿ.ಎಂ ರಾಜೇಶ್ ಗೌಡ, ಜಿಲ್ಲಾ ಯೋಜನಾ ನಿರ್ದೇಶಕ ಪ್ರವೀಣ್‌ಕುಮಾರ್, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್ ಗೌಡ, ಕನಕಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ ಮಂಜುನಾಥ್, ಜೈಪಾಲ್, ಅಶ್ವತ್ಥ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಳ್ಳುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


