nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    ಕೊರಟಗೆರೆ June 15, 2026

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    By adminJune 15, 2026No Comments2 Mins Read
    g parameshwar.jpg

    ಕೊರಟಗೆರೆ: ಅನಾರೋಗ್ಯದ ನಡುವೆಯೂ ಅಭಿಮಾನಿಗಳು ಆಯೋಜಿಸಿದ್ದ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಸಾವಿರಾರು ಕಾರ್ಯಕರ್ತರು ಅದೂರಿ ಸ್ವಾಗತ ಕೋರಿದರು. ಸಿಡಿಮದ್ದಿನ ಸಂಭ್ರಮ, ಘೋಷಣೆಗಳು ಹಾಗೂ ಮಹಿಳೆಯರ ನೃತ್ಯದ ಮೂಲಕ ನೆಚ್ಚಿನ ನಾಯಕರಿಗೆ ಭಾವಪೂರ್ಣ ಸ್ವಾಗತ ದೊರೆಯಿತು.

    ಕೊರಟಗೆರೆಯ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಾ .ಜಿ ಪರಮೇಶ್ವರ್, ಎರಡನೇ ಬಾರಿ ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಲ್ಲಲು ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ. ಹೈಕಮಾಂಡ್ ಅವಕಾಶ ನೀಡಿರಬಹುದು, ಆದರೆ ನೀವು ಗೆಲ್ಲಿಸದಿದ್ದರೆ ಈ ಸ್ಥಾನ ನಮಗೆ ದೊರೆಯುತ್ತಿರಲಿಲ್ಲ ಎಂದು ಕೃತಜ್ಞತೆ ಸಲ್ಲಿಸಿದರು.

    ನನಗೆ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿ ಉಪಮುಖ್ಯಮಂತ್ರಿಯಾಗಿ ಹಾಗೂ ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುವ ಅವಕಾಶ ಸಿಕ್ಕಿರುವುದಕ್ಕೆ ಕೊರಟಗೆರೆ ಕ್ಷೇತ್ರದ ಜನರ ಬೆಂಬಲವೇ ಕಾರಣ. ಸಿದ್ದರಾಮಯ್ಯರ ಮಾರ್ಗದರ್ಶನ ಪಕ್ಷಕ್ಕೆ ಅತ್ಯಗತ್ಯವಾಗಿದ್ದು, 3 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಜನಪರ ಯೋಜನೆಗಳನ್ನು ಜಾರಿಗೆ ತಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಿದ್ಧಾಂತಗಳನ್ನು ಎತ್ತಿ ಹಿಡಿದಿದ್ದು, ಮುಂದಿನ ದಿನಗಳಲ್ಲಿಯೂ ಅವರ ಮಾರ್ಗದರ್ಶನ ಪಕ್ಷಕ್ಕೆ ಅಗತ್ಯವಾಗಿದೆ ಎಂದು ಹೇಳಿದರು.

    ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದು, ಅನಾರೋಗ್ಯದ ಕಾರಣದಿಂದ ತಾವು ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ ಅವರು, ಜನಪರ ಕಾರ್ಯಕ್ರಮಗಳ 10 ಅನುಷ್ಠಾನದಲ್ಲಿ ಅಧಿಕಾರಿಗಳು ಹೆಚ್ಚಿನ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು. ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಾರ್ವಜನಿಕ ಸೇವೆಗೆ ಆದ್ಯತೆ ನೀಡಬೇಕು. ಕರ್ತವ್ಯ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಸಂಕಲ್ಪ ತೊಡಲಾಗಿದ್ದು, ಆಗಸ್ಟ್ ವೇಳೆಗೆ ನೀರು ಹರಿಯಲಿದೆ. ಜುಲೈನಲ್ಲಿ ನೀರು ಹರಿಯಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರದ ಅರಣ್ಯ ಕಾಯ್ದೆ ಸಂಬಂಧಿತ ಅನುಮತಿಗಳ ಕಾರಣ ವಿಳಂಬವಾಯಿತು. ಈಗ ಅನುಮತಿ ದೊರೆತಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಆಗಸ್ಟ್ ವೇಳೆಗೆ ನೀರು ಹರಿಯಲಿದೆ ಎಂದು ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕ ಗಂಗಹನುಮಯ್ಯ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ನಿಗಮ ಮಂಡಳಿ ಉಪಾಧ್ಯಕ್ಷ ನಿಮಿತ್ ರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಕಾಂಗ್ರೆಸ್ ಮಹಿಳಾಧ್ಯಕ್ಷೆ ಜಯಮ್ಮ, ಮುಖಂಡರಾದ ಪ್ರೇಮಾ ಮಹಾಲಿಂಗಪ್ಪ, ಬಲರಾಮಯ್ಯ, ಕೆ.ಆರ್.ಓಬಳರಾಜು, ಎಲ್.ರಾಜಣ್ಣ, ವಿನಯ್, ಅರವಿಂದ್, ಲಕ್ಷ್ಮಿ, ಲಕ್ಷ್ಮಮ್ಮ, ಯುವ ಅಧ್ಯಕ್ಷ ಭೈರೇಶ್, ರಘುವೀರ್, ಕೆವಿಎಲ್ಎಂ ಮಂಜು, ಅಮರ್, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ಡಿ.ಕೆ.ಶಿವಕುಮಾರ್ ಕೈ ಬಲಪಡಿಸಿ:

    ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ತಂದುಕೊಡುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರವೂ ಮಹತ್ತದ್ದಾಗಿದೆ. ಅವರ ನಾಯಕತ್ವವನ್ನು ಹೈಕಮಾಂಡ್ ಗುರುತಿಸಿ ಅವಕಾಶ ನೀಡಿದೆ. ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಅವರ ಮಾರ್ಗದರ್ಶನ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

    ಬೈರಗೊಂಡ್ಲು ಸುತ್ತಮುತ್ತ 5 ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣ ಯೋಜನೆ ಜನರ ವಿರೋಧದಿಂದ ಕೈಬಿಟ್ಟು, ಈಗ ಒಡೆಯರಹಳ್ಳಿ ಸಮೀಪ ಸುಮಾರು 500 ಎಕರೆ ವ್ಯಾಪ್ತಿಯಲ್ಲಿ ಸಣ್ಣ ಡ್ಯಾಂ ನಿರ್ಮಿಸಲು ಮುಂದಾಗಿದ್ದು, ಇದಕ್ಕೂ ವಿರೋಧ ವ್ಯಕ್ತವಾಗುತ್ತಿದೆ. ಕೊರಟಗೆರೆ ಜನರು ಭೂಮಿ ನೀಡದೆ ಎತ್ತಿನಹೊಳೆ ನೀರು ನಿರೀಕ್ಷಿಸುತ್ತಿದ್ದಾರೆ ಎಂಬ ಆರೋಪ ದೂರವಾಗಬೇಕು. ರೈತರು ಯೋಜನೆಗೆ ಸಹಕರಿಸಬೇಕು. ಭೂಸ್ವಾಧೀನಕ್ಕೆ ನ್ಯಾಯಯುತ ಪರಿಹಾರ ನೀಡಲಾಗುವುದು. ನಮ್ಮ ಕೊರಟಗೆರೆ ತಾಲೂಕಿನ 67 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಹರಿಸಲಾಗುವುದು.

    — ಡಾ.ಜಿ.ಪರಮೇಶ್ವರ್, ಡಿಸಿಎಂ

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.