nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    ಪಾವಗಡ June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    By adminJune 15, 2026No Comments2 Mins Read
    dc shubha kalyan.jpg

    ಪಾವಗಡ : ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಸಾಗರದಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ ಗ್ರಾಮಸ್ಥರಿಗೆ ಸಂಕಷ್ಟ ತಂದೊಡ್ಡಿದೆ.

    ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಆರಂಭವಾದ ಕೆಲವೇ ದಿನಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಳೆ ನೀರು ಹಲವು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮನೆಗಳೊಳಗೆ ನೀರು ನುಗ್ಗಿದ ಪರಿಣಾಮ ಶುಕ್ರವಾರ ರಾತ್ರಿ ಮತ್ತು ಶನಿವಾರದ ಇಡೀ ರಾತ್ರಿ ಮಕ್ಕಳು ಹಾಗೂ ಹಿರಿಯರು ರಾತ್ರಿ ಪೂರ್ತಿ ನಿದ್ರೆಯಿಲ್ಲದೆ ಕಾಲ ಕಳೆಯುವಂತಾಯಿತು.


    Provided by
    Provided by

    ಮನೆಯಲ್ಲಿದ್ದ ದವಸ–ಧಾನ್ಯ, ದಿನನಿತ್ಯದ ಬಳಕೆಯ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳು ನೀರಿನ ಪಾಲಾಗಿ ಹಾನಿಗೊಳಗಾಗಿದ್ದು, ಕುಟುಂಬಗಳಿಗೆ ಆರ್ಥಿಕ ನಷ್ಟ ಉಂಟಾಗಿದೆ. ಸಮರ್ಪಕ ಚರಂಡಿ ಹಾಗೂ ನೀರು ಹರಿದು ಹೋಗುವ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಕೈಗೊಂಡಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಲ್ಯಾಂಡ್ ಆರ್ಮಿ ಸಂಸ್ಥೆಯ ಇಂಜಿನಿಯರ್ಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜೊತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಕಳೆದ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಜನಸಂಪರ್ಕ ಸಭೆಯ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಭೇಟಿ ಬಳಿಕವೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಾರದಿರುವುದು ಆಡಳಿತದ ಕಾರ್ಯವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಗ್ರಾಮಸ್ಥರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಇನ್ನೂ ಇಷ್ಟೆಲ್ಲಾ ಅನಾಹುತ ಸಂಭವಿಸಿ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದರೂ, ಸಿ.ಕೆ.ಪುರ ಗ್ರಾಮ ಪಂಚಾಯಿತಿಯ ಪಿಡಿಓ ರಂಗಸ್ವಾಮಿ ಅವರು ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕಾದ ಅಧಿಕಾರಿಗಳು ಮೌನ ವಹಿಸಿರುವುದು ದುರಾದೃಷ್ಟಕರ ಬೆಳವಣಿಗೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.”

    ಗ್ರಾಮಸ್ಥರ ಸಮಸ್ಯೆಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ಸಿರಾ: ತಾಲೂಕು ಶ್ರೀ ಶಂಕರ ಸೇವಾ ಟ್ರಸ್ಟ್ ಮತ್ತು ವಿಪ್ರ ಗೆಳೆಯರ ಬಳಗ ವತಿಯಿಂದ 2025–2026 ನೆ ಸಾಲಿನ ಎಸ್ಎಸ್ಎಲ್ಸಿ…

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.