ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆ ನಡೆಸಲಾಗಿದ್ದು, ಫಲಿತಾಂಶವನ್ನು ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ ಪ್ರಕಟಿಸಿದರು. ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ್ ಮೊಕ್ತೆದಾರ್ ಚುನಾಯಿತರಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದ್ದು, ಪತ್ರಕರ್ತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡದೆ, ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೀದರದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆಯ ಪತ್ರಕರ್ತರ ಸಹಕಾರವೇ ಕಾರಣವಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ಮಾತನಾಡಿ, ಸಂಘದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಕರ್ತರಿಗೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ತಲುಪಿಸಲು ಸಂಘವು ಸದಾ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಚುನಾವಣೆಯ ಬಳಿಕ ಎರಡನೇ ಅವಧಿಗೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ್ ಮೊಕ್ತೇದಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ದೇಶಮುಖ ಅವರನ್ನು ಸತ್ಕರಿಸಿ ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್, ಕಾರ್ಯದರ್ಶಿಗಳಾದ ಸಂತೋಷ ಚೆಟ್ಟೆ, ಸ್ವಾಮಿದಾಸ್ ನಾಗುರೆ, ಕಾರ್ಯಕಾರಿ ಸದಸ್ಯರಾದ ಶರಣಪ್ಪ ಚಿಟಮೆ, ಶ್ರೀಕಾಂತ ಪಾಟೀಲ, ಚನ್ನಬಸವ ಮೊಕ್ತೆದಾರ್, ಮಲ್ಲಪ್ಪ ಗೌಡ, ಸುನಿಲ್ ಜಿರೋಬೆ, ಮನ್ಮಥ ಸ್ವಾಮಿ, ಸುಧೀರ ಪಾಂಡ್ರೆ, ರವೀಂದ್ರ ಮೊಕ್ತೆದಾರ್, ಅಹ್ಮದ್ ಜಂಬಗಿ, ಲಕ್ಷ್ಮಣ ರಾಠೋಡ್, ರವಿಕುಮಾರ್ ಶಿಂಧೆ, ಅವಿನಾಶ ಪಾಂಡ್ರೆ, ಸೂರ್ಯಕಾಂತ ಎಕಲಾರ, ಶಿವಕುಮಾರ ಸ್ವಾಮಿ, ಅಂಬ್ರೇಶ ಚಿದ್ರೆ, ರಾಜಕುಮಾರ ಚಾಂಬೋಳೆ, ರವಿಕುಮಾರ್ ಮಠಪತಿ, ಅಮರ ಸ್ವಾಮಿ, ಅಂಬಾದಾಸ್ ನಳಗೆ, ಅಮರನಾಥ, ವಿನೋದ ಚಿದ್ರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


