ಬಿದರ್: ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಜೂನ್ ಮಧ್ಯಭಾಗದ ಹೊತ್ತಿಗೆ ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಿದ್ದ ಮಳೆ ಆಗಿಲ್ಲ, ಎಲ್ ನಿನೋ ಪ್ರಭಾವದಿಂದಾಗಿ ಮುಂಗಾರು ಮಳೆ ಕೊರತೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಮಳೆಯ ಸರಾಸರಿ ಪ್ರಮಾಣ ಮತ್ತು ಸರಾಸರಿ ಮಳೆಯ ಅವಧಿ ಕಡಿಮೆ ಆಗುವ ಭೀತಿ ಎದುರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಪಾಯವೂ ಇದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಾಲಿ ನೀರು ಪೂರೈಕೆ ಮಾಡುತ್ತಿರುವ ಜಲ ಮೂಲಗಳ ಜೊತೆಗೆ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ ವಹಿಸುವ ಅಗತ್ಯ ಮನಗಾಣಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


