nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ವಿಶೇಷ ಪೂಜೆ
    ಜಿಲ್ಲಾ ಸುದ್ದಿ March 2, 2022

    ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ವಿಶೇಷ ಪೂಜೆ

    By adminMarch 2, 2022No Comments2 Mins Read
    shivarathri

    ಚಿತ್ರದುರ್ಗ: ಶಿವರಾತ್ರಿಯ ಪ್ರಯುಕ್ತ ಜಿಲ್ಲೆಯ ಹಿರಿಯೂರು ನಗರದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ನಡೆಯಿತು.  ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಮಹಾಶಿವರಾತ್ರಿಯ ವಿಶೇಷತೆಗಳೆಂದರೆ,  ಈ ದಿನ ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ.  ಶಿವರಾತ್ರಿಯ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು ಎನ್ನುವ ನಂಬಿಕೆಗಳಿವೆ.


    Provided by
    Provided by

    ಶಿವರಾತ್ರಿ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಪಠಿಸಬೇಕು ಎಂದು ಜನರು ನಂಬುತ್ತಾರೆ. ಶಿವರಾತ್ರಿಯ ದಿನ ಶಿವನ  ದೇವಾಲಯಗಳಲ್ಲಿ ಭಕ್ತರು ಶಿವನ ದರ್ಶನ ಮಾಡಿ ಶಿವನ ಕೃಪೆಗೆ ಪಾತ್ರರಾಗುತ್ತಿದ್ದಾರೆ.

    ಶಿವರಾತ್ರಿಯ  ದಿನದಂದು ಶಿವನ ಮೂರ್ತಿ ಹಾಗೂ ಶಿವನ ಲಿಂಗವನ್ನು ಪೂಜಿಸಲಾಗುತ್ತದೆ. ಶಿವಲಿಂಗವು  ಶಿವನ ಸಂಕೇತವಾಗಿದೆ.  ಶಿವ ಎಂದರೆ ಕಲ್ಯಾಣ ಮತ್ತು ಲಿಂಗ ಎಂದರೆ ಸೃಷ್ಟಿ ಎಂದರ್ಥ. ಪೌರಾಣಿಕ ಗ್ರಂಥಗಳ ಪ್ರಕಾರ, ಭಗವಾನ್  ಶಿವನು ಭೂಮಿಯ ಮೇಲೆ ಜೀವನವನ್ನು ಪ್ರಚಾರ ಮಾಡಲು ಪ್ರಯತ್ನಿಸಿದನು.  ಅದಕ್ಕಾಗಿಯೇ ಶಿವನನ್ನು ಆದಿದೇವ ಎಂದೂ ಕರೆಯಲಾಗುತ್ತದೆ.

    ಮಹಾಶಿವರಾತ್ರಿಯ ಈ ಪವಿತ್ರ ಹಬ್ಬವನ್ನು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನದಂದು ಆಚರಿಸಲಾಗುತ್ತದೆ.  ಜೊತೆಗೆ ಭಗವಾನ್ ಭೋಲೆನಾಥನನ್ನು ಮಹಾಶಿವರಾತ್ರಿಯ ದಿನದಂದು ಪೂರ್ಣ ವಿಧಿವಿಧಾನಗಳೊಂದಿಗೆ ಪೂಜಿಸಲಾಗುತ್ತದೆ.  ಈ ದಿನದಂದು ಮಹಾದೇವನ ಆರಾಧನೆ ಮಾಡುತ್ತಾ ಉಪವಾಸವನ್ನು ಮಾಡುವುದರಿಂದ ಅದೃಷ್ಟ ಮತ್ತು ಸಮೃದ್ಧಿಯನ್ನು ಲಭಿಸುತ್ತದೆ ಎಂದು ನಂಬಲಾಗುತ್ತದೆ.

    ಹಿಂದೂಗಳಿಗೆ ಮಹಾಶಿವರಾತ್ರಿ ಬಹಳ ಮಹತ್ವವಾದ ಆಚರಣೆಯಾಗಿದೆ.  ಶಿವರಾತ್ರಿಯ ದಿನದಂದು ಜಾಗರಣೆ ಇದ್ದು ಶಿವನನ್ನು ಪೂಜಿಸಲಾಗುವುದು.  ಯಾರು ಶಿವರಾತ್ರಿಯಂದು ಉಪವಾಸವಿದ್ದು ಶಿವನ ಪೂಜೆ ಮಾಡುತ್ತಾರೋ ಅವರು ಶಿವನ ಕೃಪೆಗೆ ಪಾತ್ರರಾಗುತ್ತಾರೆ ಎಂಬುವುದು ಅವನ ಭಕ್ತರ ಅಚಲ ನಂಬಿಕೆಯಾಗಿದೆ.

    ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಮಾಸದ ಕೃಷ್ಣ ಚತುರ್ದಶಿ ದಿನವನ್ನು ಮಾಸ ಶಿವರಾತ್ರಿ ಆಚರಿಸಲಾಗುವುದು. ವರ್ಷದಲ್ಲಿ ಒಟ್ಟು 12 ಶಿವರಾತ್ರಿಗಳನ್ನು ಆಚರಿಸಲಾಗುವುದು. ಅವುಗಳಲ್ಲಿ ಮಹಾಶಿವರಾತ್ರಿ ತುಂಬಾ ದೊಡ್ಡ ಆಚರಣೆಯಾಗಿದೆ. ಸಾಮಾನ್ಯವಾಗಿ ಶಿವರಾತ್ರಿ ಫೆಬ್ರವರಿ – ಮಾರ್ಚ್ ತಿಂಗಳಿನಲ್ಲಿ ಬರುವುದು. ಈ ವರ್ಷ ಮಾರ್ಚ್ನಲ್ಲಿ ಬಂದಿದೆ. ಈ ದಿನ ಶಿವನನ್ನು ಶುಭ ಮುಹೂರ್ತದಲ್ಲಿ ಪೂಜಿಸುವುದರಿಂದ ಹೆಚ್ಚಿನ ಫಲ ದೊರೆಯುವುದು.

    ಮಹಾಶಿವರಾತ್ರಿ ಮಹತ್ವ ಮಹಾಶಿವರಾತ್ರಿಯಂದು ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ.  ಈ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು.  ಈ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಪಠಿಸಬೇಕು. ಆಗ ಶಿವನು ನಮ್ಮ ಬೇಡಿಕೆಗಳನ್ನು ಪೂರೈಸುತ್ತಾನೆ. ಜೀವನದಲ್ಲಿ ನೆಮ್ಮದಿ ಇರುವುದು, ಸಂತಾನ ಭಾಗ್ಯ ಉಂಟಾಗುವುದು ಎಂದು ಭಕ್ತರು  ನಂಬಿಕೊಂಡು ಬಂದಿದ್ದಾರೆ.

    ಕಳೆದ ರಾತ್ರಿ ಶಿವರಾತ್ರಿ ಪ್ರಯುಕ್ತ  ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪ್ರಸಿದ್ದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಹ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶಿವನಿಗೆ ವಿಶೇಷ ಪೂಜೆ ಅಲಂಕಾರ ಗಳು ಬಹಳ ವಿಜೃಂಭಣೆಯಿಂದ ನೆರವೇರಿಸಲ್ಪಟ್ಟಿತು.  ದೇವಸ್ಥಾನದ ಆವರಣದ ಒಳಗಡೆ ಇರುವ ಕಾಳಿಕಾದೇವಿಗೂ ಸಹ ವಿಶೇಷ ಪೂಜೆ ಕಾರ್ಯಕ್ರಮ ಗಳು ಬಹಳ ವಿಜೃಂಭಣೆಯಿಂದ ನೆರವೇರಿತು.

    ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಅಧಿಕಾರಿಗಳು, ಹಾಗೂ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳಾದ  ಮಾಯವರ್ಮ ಆರ್. ಹಾಗೂ ಕುಟುಂಬಸ್ಥರು, ಗ್ರಾಮಲೆಕ್ಕಾಧಿಕಾರಿಯಾದ ಮಂಜುನಾಥ್ ಹಾಗೂ ಕುಟುಂಬಸ್ಥರು, ಈ ಸಂದರ್ಭದಲ್ಲಿ ಭಾಗವಹಿಸಿದರು.

    ಇದೇ ಸಂದರ್ಭದಲ್ಲಿ ಕಲಾಸಂಪದದಿಂದ  ಸಣ್ಣಮಕ್ಕಳಿಗೆ ನೃತ್ಯ, ಸಂಗೀತ , ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮಕ್ಕೆ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಈ ಕಾರ್ಯಕ್ರಮಕ್ಕೆ ಭಾಗವಹಿಸಿ , ದೀಪವನ್ನು ಬೆಳಗುವುದರ ಮೂಲಕ ಈ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ತಾಲ್ಲೂಕು ದಂಡಾಧಿಕಾರಿಗಳಾದ ಶಿವಕುಮಾರ್ ವಿ. ಅವರು ಭಾಗವಹಿಸಿದರು.

    ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪಾನಕ, ಅನ್ನಸಂತರ್ಪಣೆ, ಕಾರ್ಯಕ್ರಮಗಳು ಏರ್ಪಾಡಿಸಿದ್ದು  ಬಹಳ ವಿಜೃಂಭಣೆಯಿಂದ ನೆರವೇರಿತು.

    ವರದಿ:  ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.