ಕೊರಟಗೆರೆ : ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆ ಮಹಿಳೆಯ ಕೈ ಕಾಲು ಕಟ್ಟಿಹಾಕಿ ಬಾಯಿಗೆ ಕವಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ವೃದ್ದೆಯ ಮೈ ಮೇಲೆ ಇದ್ದ 80 ಸಾವಿರ ಮೌಲ್ಯದ ಚಿನ್ನಭರಣ ದೋಚಿ ಪರಾರಿ ಆಗಿರುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.
ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರುಂಕೋಟೆ ಗ್ರಾಪಂ ವ್ಯಾಪ್ತಿಯ ದಾಸಾಲುಕುಂಟೆ ಗ್ರಾಮದ ವೃದ್ದೆ ರತ್ನಮ್ಮ(65) ಕೊಲೆಯಾದ ದುರ್ದೈವಿ. ತನ್ನ ಅಡಿಕೆ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಹಣದ ಆಸೆಯಿಂದ ವೃದ್ದೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ವೃದ್ದೆ ಮಹಿಳೆಯ ಸೊಸೆ ಇಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿ ನೀಡಿದ ದೂರಿನ ಅನ್ವಯ ಸ್ಥಳಕ್ಕೆ ಸಿಪಿಐ ಪುರುಷೋತ್ತಮ, ಪಿಎಸೈ ತಿರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


