ಬೆಂಗಳೂರು: ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಮುಕ್ತಾಯಗೊಂಡಿದ್ದು, ಎಲ್ಲ 222 ಶಾಸಕರಿಂದ ಮತದಾನ ನಡೆದಿದೆ.
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದು ಕಂಡುಬಂತು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕರಿದ್ದ ಕೊಠಡಿಯಲ್ಲಿ ಹೆಬ್ಬಾರ್, ಸೋಮಶೇಖರ್ ಕೂಡ ಉಪಸ್ಥಿತರಿದ್ದರು.
ಇನ್ನೂ, ಡಿಸಿಎಂ ಪರಮೇಶ್ವರ್ ಜೊತೆ ಮತಚಲಾಯಿಸಲೆಂದು ಕಾದು ಕಾದು ಕೊನೆಗೆ ಸಿಎಂ ಡಿ.ಕೆ.ಶಿವಕುಮಾರ್ ಒಬ್ಬರೇ ತೆರಳಿ ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಡಾ.ಪರಮೇಶ್ವರ್ ಬರ್ತಾರೆ ಎನ್ನಲಾಗಿತ್ತಾದರೂ 1:30 ಕಳೆದರೂ ಬಂದಿರಲಿಲ್ಲ. ಅನಾರೋಗ್ಯದ ಹಿನ್ನೆಲೆ ತಡವಾಗಿ ಪರಮೇಶ್ವರ್ ಆಗಮಿಸಿದ್ದು, ಮಾಸ್ಕ್ ಹಾಕಿಕೊಂಡು ಬಂದೇ ವೋಟ್ ಮಾಡಿದ್ದಾರೆ.
ಇನ್ನೊಂದೆಡೆ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ಮತ ಹಾಕಲು ಬಂದ ವೇಳೆ ಕಾಂಗ್ರೆಸ್ ನ ಉಗ್ರಪ್ಪ ಆಕ್ಷೇಪ ತೆಗೆದಿದ್ದು, ಮತ ಹಾಕುವ ಬಗ್ಗೆ ಅವರು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಮತವನ್ನು ಮತಪೆಟ್ಟಿಗೆಗೆ ಹಾಕಬೇಡಿ ಎಂದು ಚುನಾವಣಾಧಿಕಾರಿಯನ್ನು ಒತ್ತಾಯಿಸಿದರು ಆದರೆ, ಅಂತಿಮವಾಗಿ ಉಗ್ರಪ್ಪ ಆಕ್ಷೇಪವನ್ನು ತಿರಸ್ಕರಿಸಿ ಯತ್ನಾಳ್ ಗೆ ಮತ ಹಾಕಲು ಚುನಾವಣಾಧಿಕಾರಿ ಅವಕಾಶ ನೀಡಿದ್ದಾರೆ.
ಚುನಾವಣಾ ಅಖಾಡಕ್ಕಿಳಿಸಿರುವ ಏಕೈಕ ಅಭ್ಯರ್ಥಿಯ ಗೆಲುವಿಗೆ ಜೆಡಿಎಸ್ ನಾನಾ ಕಸರತ್ತು ನಡುವೆ, ಜಿ.ಟಿ.ದೇವೇಗೌಡ ಪ್ರತ್ಯೇಕವಾಗಿ ಬಂದು ಮತ ಚಲಾಯಿಸಿ ಅಚ್ಚರಿ ಮೂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


