ಸಿರಾ : ಈಗಾಗಲೇ ಕಳೆದ ಸುಮಾರು 8 ವರ್ಷಗಳಲ್ಲಿ ನಗರದಲ್ಲಿ 10 ಕ್ಕೂ ಹೆಚ್ಚು ನಂದಿನಿ ಪಾರ್ಲರ್‌ಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾದ ಶಿರಾದಲ್ಲಿ ಮತ್ತೊಂದು ಮಳಿಗೆ ಆರಂಭವಾಗಿರುವುದು ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಅಭಿಪ್ರಾಯಪಟ್ಟರು.
ನಗರದ ಹೃದಯ ಭಾಗದಲ್ಲಿರುವ ಬುಕ್ಕಪಟ್ಟಣ ವೃತ್ತದಲ್ಲಿ ನೂತನ ನಂದಿನಿ ಕ್ಷೀರ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಂದಿನಿ ಉತ್ಪನ್ನಗಳ ಮಾರಾಟ ಮತ್ತು ಮಾರುಕಟ್ಟೆ ವಿಸ್ತರಣೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆದಾಯ ದೊರೆಯಲಿದ್ದು, ರೈತರ ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ, ನಗರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ನೂತನ ಪಾರ್ಲರ್ ಆರಂಭಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಳಿಗೆಯ ನಿರ್ವಹಣೆಯ ಜವಾಬ್ದಾರಿಯನ್ನು ಚನ್ನನಕುಂಟೆ ಕೃಷ್ಣಪ್ಪ ಅವರಿಗೆ ಹಸ್ತಾಂತರಿಸಿದ್ದು,ಅವರು ಗ್ರಾಹಕರಿಗೆ ಗುಣಮಟ್ಟದ ಸೇವೆ ಹಾಗೂ ನಂದಿನಿಯ ವಿವಿಧ ಉತ್ಪನ್ನಗಳನ್ನು ನಿಗದಿತ ಸಮಯಕ್ಕೆ ಲಭ್ಯವಾಗುವಂತೆ ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ನಂದಿನಿ ಮಳಿಗೆಗಳನ್ನು ಪ್ರಾರಂಭಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


