ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಜಿಲ್ಲಾ ಬಾಲಭವನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಮಕ್ಕಳಿಗೆ ವಿವಿಧ ಚಟುವಟಿಕೆಗಳ ಮೂಲಕ ಅವಕಾಶ ನೀಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಜಿಲ್ಲಾ ಬಾಲಭವನ ಅಭಿವೃದ್ಧಿಗೊಳಿಸಲು ಮಾಸ್ಟರ್ ಪ್ಲಾನ್ ರೂಪಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ.ಎಸ್.ಸಿದ್ದರಾಮಣ್ಣ ರವರಿಗೆ ನಿರ್ದೇಶನ ನೀಡಿದರು.
5–16 ವರ್ಷದ ಮಕ್ಕಳು ಬಾಲಭವನದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಬೇಕು. ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ರೂಪಿಸಬೇಕು. ಬಾಲ ಭವನ ಕಟ್ಟಡ ನೆಲಮಾಳಿಗೆ ನೀರಿನಿಂದ ಆವೃತಗೊಳ್ಳದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಉಪನಿರ್ದೇಶಕರಾದ ಡಾ ಎಸ್ ಸಿದ್ದರಾಮಣ್ಣ, ಜಿಲ್ಲಾ ಬಾಲಭವನ ಸಮಿತಿ, ವ್ಯವಸ್ಥಾಪಕರಾದ, ಚಿದಾನಂದ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಗಳಾದ ಪವಿತ್ರ ಆರ್.ಜಿ., ಜಿಲ್ಲಾ ಬಾಲಭವನ ಸಮಿತಿಯ ಸದಸ್ಯರಾದ ಬಸವರಾಜು ಮತ್ತು ನರಸಿಂಹಮೂರ್ತಿ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


