nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    ತುಮಕೂರು June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    By adminJune 22, 2026No Comments2 Mins Read
    v somanna.jpg

    Provided by
    Provided by

    ತುಮಕೂರು: ದೈಹಿಕ ಒತ್ತಡ, ಮಾನಸಿಕ ಒತ್ತಡ, ಮೊಬೈಲ್ ಅವಲಂಬನೆ ಹಾಗೂ ಅನಾರೋಗ್ಯದಂತಹ ಸಮಸ್ಯೆಗಳಿಗೆ ಯೋಗ ಅತ್ಯಂತ ಅವಶ್ಯ ಸಾಧನ ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಹಾಗೂ ಶ್ರೀ ಪತಂಜಲಿ ಯೋಗ ಕೇಂದ್ರ ಇವರ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನರು ವಿವಿಧ ಕಾರಣಗಳಿಂದ ದೈಹಿಕ, ಮಾನಸಿಕ ಒತ್ತಡಗಳಿಂದ ಬಳಲುತ್ತಿದ್ದಾರೆ, ಅತಿಯಾದ ಮೊಬೈಲ್ ಅವಲಂಬನೆಯಿಂದಾಗಿ ಖಿನ್ನತೆಗೆ ಒಳಗಾಗಿ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ಯೋಗ ಒಂದೇ ಪರಿಹಾರವಾಗಿದೆ ಎಂದರು.

    ಕೊರೋನದಂತಹ ಸಾಂಕ್ರಾಮಿಕ ರೋಗದ ಪಿಡುಗಿನ ಸಂದರ್ಭದಲ್ಲಿ ಅದು ಜನರಿಗೆ ಅರಿವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗ ಉತ್ತಮ ಆರೋಗ್ಯ ತಂತ್ರ ಎಂಬುದನ್ನು ಜಗತ್ತಿನಾದ್ಯಂತ ಎಲ್ಲರೂ ಒಪ್ಪಿಕೊಂಡಿದ್ದಾರೆ. ಯೋಗ ಸಂಸ್ಕೃತಿಯನ್ನು ವಿಶ್ವದೆಡೆಗೆ ಕೊಂಡೊಯ್ದ ಕೀರ್ತಿ ಭಾರತ ಸರ್ಕಾರದ್ದಾಗಿದೆ ಎಂದು ಅವರು ಹೇಳಿದರು. ಈ ವೇಳೆ ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ ಸಿಇಒ ಅಶ್ವಿಜ ಬಿ.ವಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ಗಂಗಾಧರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಸೇರಿದಂತೆ ವಿವಿಧ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಮುಖ್ಯಸ್ಥರು, ಯೋಗಪಟುಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಯೋಗ ಕೇವಲ ಒಂದು ದಿನ ಆಚರಣೆಗೆ ಸೀಮಿತವಾಗದೆ ಜನರ ಬದುಕಿನ ಭಾಗವಾಗಬೇಕು ಇಂದು ವಿಶ್ವಮಾನ್ಯ ಯೋಗ ಕಾರ್ಯಕ್ರಮವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಯೋಗವು ಹಲವು ವಿಶೇಷತೆಗಳ ಸಂಗಮ. ಯೋಗದ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಪ್ರತಿ ವರ್ಷವೂ ಒಂದೊಂದು ಘೋಷವಾಕ್ಯದೊಂದಿಗೆ ಜೂ. 21ರಂದು ಅಂತರರಾಷ್ಟ್ರೀಯ ಯೋಗವನ್ನು ಆಚರಿಸಲು ವಿಶ್ವಸಂಸ್ಥೆ ಘೋಷಿಸಿದೆ. ಈ ವರ್ಷ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ವಿಶ್ವದಾದ್ಯಂತ ಯೋಗದಿನ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

    — ವಿ.ಸೋಮಣ್ಣ, ಕೇಂದ್ರ ಸಚಿವ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.