nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    ತುಮಕೂರು June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    By adminJune 23, 2026No Comments2 Mins Read
    tumakur zp.jpg

    Provided by
    Provided by

    ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನ್ಯತೆ ಕಂಡು ಬಂದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ಹಾಸ್ಟೆಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳು ಕಂಡು ಬಂದರೆ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಪ್ರತಿನಿತ್ಯ ವಿದ್ಯಾರ್ಥಿ ನಿಲಯದ ವಿಜಯ ಪಾಲಕರು ಕರ್ತವ್ಯ ಆಪ್ ಬಳಸಿ ತಮ್ಮ ಹಾಜರಾತಿಯನ್ನು ಹಾಕಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸವಿದ್ದು ಅದರ ದೃಢೀಕರಣವನ್ನು ಇಲಾಖೆಗೆ ಸಲ್ಲಿಸಬೇಕು.
    ನಿಲಯ ಪಾಲಕರು ಶನಿವಾರ ಮತ್ತು ಭಾನುವಾರ ಹಾಸ್ಟೆಲ್ ಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಸದರಿ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
    ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರಸ್ತುತ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು ಇನ್ನು ಮುಂದೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ವಿದ್ಯಾರ್ಥಿನಿರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಋತುಚಕ್ರ ವಹಿಯನ್ನು ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರತಿ ತಿಂಗಳು ತಪಾಸಣೆ ಕೈಗೊಂಡು, ಮಕ್ಕಳಲ್ಲಿ ಋತುಚಕ್ರದಲ್ಲಿ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಪೋಷಕರಿಗೆ ಮಾಹಿತಿ ನೀಡಬೇಕು ಎಂದರು.


    Provided by
    Provided by

    ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಗಳಾದ ಹಾಸಿಗೆ, ಹೊದಿಕೆ, ದಿಂಬು, ವಾಟರ್ ಹೀಟರ್, ಕುಡಿಯುವ ನೀರು, ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ಚರಂಡಿ, ಕುಡಿಯುವ ನೀರು, ಸೋಲಾರ್, ವಾಟರ್ ಹೀಟರ್ ಸೇರಿದಂತೆ ಮೂಲಭೂತ ಅಗತ್ಯತೆಯ ಬಗ್ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದ್ದು ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

    ನಿಲಯ ಪಾಲಕರು ಕಡ್ಡಾಯವಾಗಿ ಹಾಸ್ಟೆಲ್ ಗಳಲ್ಲಿ ಊಟ ಸವಿದು ನಂತರ ಮಕ್ಕಳಿಗೆ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಯಾವ ಮಗುವಿಗೂ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಲಾಯಿತು.

    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಆಡಳಿತ) ಗಳಾದ ಈಶ್ವರಪ್ಪ, ಉಪ ಕಾರ್ಯದರ್ಶಿ(ಅಭಿವೃದ್ಧಿ)ಗಳಾದ ಸಂಜೀವಪ್ಪ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ ಯೋಗಾನಂದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಸಾನಿಯಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.