ತುಮಕೂರು : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 41 ಸರ್ಕಾರಿ ನೌಕರರ ವರ್ಗಾವಣೆ ಮಾಡಲಾಯಿತು.
2025–26 ನೇ ಸಾಲಿನ ಗ್ರೇಡ್–1 ಕಾರ್ಯದರ್ಶಿ 15 ನೌಕರರು, ಗ್ರೇಡ್– 2 ಕಾರ್ಯದರ್ಶಿ 15 ನೌಕರರು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು 11 ಜನ ಸೇರಿ ಒಟ್ಟು 41 ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಜಿಲ್ಲಾ ಪಂಚಾಯಿತಿಯಲ್ಲಿ ಜರುಗಿಸಲಾಯಿತು.
ವರ್ಗಾವಣೆ ಪ್ರಕ್ರಿಯೆಯು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನಡೆಸಲಾಗಿದ್ದು, ನೌಕರರ ಸಮಕ್ಷಮದಲ್ಲಿಯೇ ವರ್ಗಾವಣೆ ಆದೇಶಗಳನ್ನು ವಿತರಿಸಲಾಯಿತು.
ಈ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲಾ ಪಂಚಾಯಿತಿ ಗ್ರೇಡ್ — 2 ಕಾರ್ಯದರ್ಶಿ ಮತ್ತು ದ್ವಿತಿಯ ದರ್ಜೆ ಲೆಕ್ಕ ಸಹಾಯಕರ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಭಾಗಿಯಾಗಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




