nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    ಮಧುಗಿರಿ June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    By adminJune 24, 2026No Comments2 Mins Read
    madhugiri

    Provided by
    Provided by

    ಮಧುಗಿರಿ : ಬಾಲ್ಯಾವಸ್ಥೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಇತರರಿಗೆ ರಕ್ತದಾನ ಮಾಡಲು ರಕ್ತ ಪರೀಕ್ಷೆ ಬಹಳ ಮುಖ್ಯ ಎಂದು ಮಾಜಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು.

    ತಾಲ್ಲೂಕಿನ ಮಿಡಿಗೇಶಿಯ ಕೆಪಿಎಸ್ ಶಾಲೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಮಧುಗಿರಿ, ಶ್ರೀ ರಾಘವೇಂದ್ರ ಆಸ್ಪತ್ರೆ, ಗುರುಶ್ರೀ ಆಸ್ಪತ್ರೆ, ಹಾಗೂ ಶ್ರೀ ಸತ್ಯಸಾಯಿ ಆಸ್ಪತ್ರೆ ಮಧುಗಿರಿ ಇವರ ಸಹಯೋಗದಲ್ಲಿ ಸುತ್ತಲಿನ ಹತ್ತಾರು ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ರಕ್ತ ಪರೀಕ್ಷೆ ನಡೆಸಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಶಿಕ್ಷಣದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಇಂದು ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಉಚಿತ ರಕ್ತ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ.

    ರಕ್ತ ಪರೀಕ್ಷೆ ಉದ್ದೇಶವನ್ನು ನೀವು ತಿಳಿಯಬೇಕಿದ್ದು, ಅಪಘಾತ ಹಾಗೂ ಶಸ್ತ್ರಚಿಕಿತ್ಸೆ ಸಮಯದಲ್ಲಿ ಗಾಯಾಳುಗಳಿಗೆ ನೆರವಾಗಲು ಅಥವಾ ಸ್ವತಃ ನಿಮಗೇ ರಕ್ತದ ನೆರವು ಬೇಕಾದಲ್ಲಿ ರಕ್ತದ ಗುಂಪಿನ ಬಗ್ಗೆ ತಿಳಿದಿರಬೇಕು. ಇದು ಬಹಳ ಮುಖ್ಯ. ಹಾಗೂ ರಕ್ತದಾನ ಮಾಡಲು ನಿಮಗೆ ಇದು ಸಹಕಾರಿಯಾಗಲಿದೆ. ರಕ್ತ ದಾನಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಹಾಗೆಯೇ ರಕ್ತ ಉತ್ಪಾದನೆಯಾಗಲು ಪೌಷ್ಟಿಕಾಂಶ ಆಹಾರ ಸೇವಿಸಬೇಕು. ನೀವು ಆರೋಗ್ಯವಾಗಿದ್ದು, ಸಮಾಜವನ್ನು ಆರೋಗ್ಯಕರವಾಗಿ ಇಡಲು ರಕ್ತ ಬಹಳ ಮುಖ್ಯ.‌ ಅಂತಹ ರಕ್ತದ ಬಗ್ಗೆ ನೀವು ತಿಳಿದಿರಬೇಕು. ಈ ವರ್ಷ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದು, ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

    ಹಿಂದೆ ವಿದ್ಯಾರ್ಥಿಗಳಿಗೆ ಆರೋಗ್ಯದ ಮಾಹಿತಿಗಳು ಸುಲಭವಾಗಿ ತಿಳಿಯುತ್ತಿರಲಿಲ್ಲ. ಆದರೆ ಈಗ ರಕ್ತ ಪರೀಕ್ಷೆಯಂತಹ ಶಿಬಿರಗಳ ಮೂಲಕ ತಮ್ಮ ಆರೋಗ್ಯದ ಸ್ಥಿತಿಯನ್ನು ಕೆಲವೇ ನಿಮಿಷಗಳಲ್ಲಿ ತಿಳಿದುಕೊಳ್ಳುವ ಅವಕಾಶ ದೊರೆಯುತ್ತಿದೆ. ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಮಟ್ಟದ ಸಾಧನೆ ಮಾಡುವ ಗುರಿಯನ್ನು ಹೊಂದಬೇಕು ಎಂದು ಕರೆ ನೀಡಿದರು.


    Provided by
    Provided by

    ಮೊಬೈಲ್ ಬಳಕೆ ಮಿತಿಗೊಳಿಸಿ, ದಿನಪತ್ರಿಕೆಗಳು ಹಾಗೂ ಪುಸ್ತಕಗಳ ಓದಿನ ಕಡೆ ಹೆಚ್ಚು ಗಮನ ಹರಿಸಬೇಕು. ಮುಂದೆ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.

    ಪಿಡಿಓ ರಂಗನಾಥ್ ಮಾತನಾಡಿ, ಅನೇಕ ವಿದ್ಯಾರ್ಥಿಗಳಿಗೆ ತಮ್ಮ ರಕ್ತದ ಗುಂಪಿನ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಈ ಶಿಬಿರದಿಂದ ಎಲ್ಲ ವಿದ್ಯಾರ್ಥಿಗಳಿಗೂ ತಮ್ಮ ರಕ್ತದ ಗುಂಪು ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಲಿದೆ ಎಂದರು.

    ಹಳ್ಳಿಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಇಂದು ಉನ್ನತ ಹುದ್ದೆ ಅಲಂಕರಿಸಿದ್ದಾರೆ. ನೀವು ಕೂಡ ಸರ್ಕಾರಿ ಶಾಲೆ ಎಂಬ ಕೀಳಿರಿಮೆ ತೊರೆದು ಸಾಧನೆಯತ್ತ ಗಮನಹರಿಸಿ ಎಂದರು.

    ಶಾಲೆಯ ಎಸ್‌ ಡಿ ಎಂ ಸಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಮಲ್ಲಿಕಾರ್ಜುನಯ್ಯ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಅವಕಾಶ ದೊರೆಯುತ್ತಿರುವುದು ಸರ್ಕಾರಿ ಶಾಲೆಗಳ ಮೂಲಕವೇ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಹುಟ್ಟು ಮತ್ತು ಸಾವಿನ ನಡುವಿನ ಜೀವನದಲ್ಲಿ ನಾವು ಏನು ಸಾಧನೆ ಮಾಡಿದ್ದೇವೆ ಎಂಬುದೇ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ  ಪ್ರಾಂಶುಪಾಲರಾದ ಶಿವಕುಮಾರ್, ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ನಾಗೇಂದ್ರ, ಮುಖ್ಯಶಿಕ್ಷಕಿ ಹೇಮಾವತಿ, ಸತ್ಯಸಾಯಿ ಆಸ್ಪತ್ರೆಯ ರಘುನಂದನ್, ಶಾಲೆಯ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.