ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಉಪನಿರ್ದೇಶಕ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಜಾಲತಾಣ https://bcwd.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




